ಮನೋರಂಜನೆ

ಸುಶಾಂತ್‌ ಮ್ಯಾನೇಜರ್‌ ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವಿನ ತನಿಖೆ; ರಾಜ್ಯ ಸರಕಾರಕ್ಕೆ ಹೆಚ್ಚುತ್ತಿರುವ ಒತ್ತಡ

Pinterest LinkedIn Tumblr


ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಇತ್ತೀಚೆಗೆ ದೇಶದೆಲ್ಲೆಡೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದರ ಜೊತೆಗೆ ಸುಶಾಂತ್‌ ಮ್ಯಾನೇಜರ್ ಆಗಿದ್ದ ಕರ್ನಾಟಕದ ದಿಶಾ ಸಾಲಿಯಾನ್ ಸಾವಿನ ವಿಚಾರವೂ ಇದೀಗ ಭಾರೀ‌ ಸುದ್ಧಿಯಲ್ಲಿದೆ. ಅಲ್ಲದೆ, ಈ ಪ್ರಕರಣದ ತನಿಖೆಗೆ ಇದೀಗ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಿದೆ.

ಮೂಲತ. ಉಡುಪಿ‌ ಜಿಲ್ಲೆಯವರಾದ ದಿಶಾ ಸಾಲ್ಯಾನ್ ಬೆಳೆದಿದ್ದು ಮುಂಬೈನಲ್ಲಿ. ತಮ್ಮ ತಂದೆ ತಾಯಿಯೊಂದಿಗೆ ಅಲ್ಲೇ ನೆಲೆ ನಿಂತಿದ್ದರು. ತನ್ನ ವಿದ್ಯಾಭ್ಯಾಸದ ಬಳಿಕ ಸ್ಥಳೀಯ ಸುದ್ದಿ ವಾಹಿನಿ, ಪತ್ರಿಕೆಗಳಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ ದಿಶಾ ಸುಶಾಂತ್‌ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಜೂನ್ 8 ರಂದು ‌ಆಕೆ ಮುಂಬಯಿಯ ಮಲಾಡ್ನ್ ನಲ್ಲಿರುವ ತನ್ನ ಗೆಳೆಯನ 14 ಮಹಡಿಯಲ್ಲಿರುವ ಫ್ಲಾಟ್ ನಿಂದ ಬಿದ್ದು ಸಾವನ್ನಪ್ಪಿದ್ದರು.

ಮುಂಬಯಿ ಪೋಲೀಸರು ಇದನ್ನು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ದಿಶಾ ಸಾವಿನ ಬಳಿಕ ಕೆಲವೇ ದಿನಗಳಲ್ಲಿ ಆಕೆಯ ಬಾಸ್ ಆಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ಕೂಡಾ ಅನುಮಾನಾಸ್ಪದ ರೀತಿಯಲ್ಲೇ ಸಾವನ್ನಪ್ಪಿದ್ದರು. ಸುಶಾಂತ್ ಸಾವು ಆತ್ಮಹತ್ಯೆಯಲ್ಲ, ಕೊಲೆ ಎನ್ನುವ ಆರೋಪ ಕೇಳಿಬರುತ್ತಿರುವ ನಡುವೆಯೇ ದಿಶಾ ಸಾಲಿಯಾನ್ ಸಾವೂ ಕೊಲೆ ಎನ್ನುವ ಆರೋಪ ಇದೀಗ ಕೇಳಿ ಬರಲಾರಂಭಿಸಿದೆ.

ದಿಶಾ ಸಾವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎನ್ನುವ ಕೂಗೂ ಇದೀಗ ಸಾರ್ವಜನಿಕ ವಲಯದಿಂದ ಕೇಳಿ ಬರಲಾರಂಭಿಸಿದೆ. ಜಸ್ಟೀಸ್ ಫಾರ್ ದಿಶಾ ಎನ್ನುವ ಹ್ಯಾಶ್ ಟ್ಯಾಗ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿವೆ. ವಾಟ್ಸ್ ಅಪ್ ಗ್ರೂಪ್ ಗಳೂ ಇದೇ ಕಾರಣಕ್ಕಾಗಿ ರೂಪುಗೊಂಡಿದ್ದು, ಕರ್ನಾಟಕ ಮೂಲದ‌ ದಿಶಾಗೆ ಕರ್ನಾಟಕ ಸರಕಾರ ನ್ಯಾಯ ಕೊಡಬೇಕು ಎನ್ನುವ ಒತ್ತಾಯವೂ ಹೆಚ್ಚಾಗಲಾರಂಭಿಸಿದೆ.

ಉಡುಪಿ ಮೂಲದ ದಿಶಾ ಸಾವನ್ನು ಕರ್ನಾಟಕ ಸರಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎನ್ನುವ ಒತ್ತಡವೂ ಇದ್ದು, ಸರಕಾರ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎನ್ನುವ ಕೂಗು ಕೇಳಿ ಬರಲಾರಂಭಿಸಿದೆ. ಆದರೆ, ಸರ್ಕಾರ ಈ ಕುರಿತು ಯಾವ ನಿರ್ಧಾರ ತೆಗೆದುಕೊಳ್ಳಲಿದೆ? ಎಂಬುದನ್ನು ಕಾದುನೋಡಬೇಕಿದೆ.

Comments are closed.