ಮನೋರಂಜನೆ

ನಟಿ ಶರ್ಮಿಳಾ ಮಾಂಡ್ರೆಗೆ ಕೊರೋನಾ!

Pinterest LinkedIn Tumblr


ಬೆಂಗಳೂರು: ಸ್ಯಾಂಡಲ್’ವುಡ್ ನಟಿ ಶರ್ಮಿಳಾ ಮಾಂಡ್ರೆಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ಗುರುವಾರ ತಿಳಿದುಬಂದಿದೆ.

ಈ ಕುರಿತು ಸ್ವತಃ ನಟಿ ಶರ್ಮಿಳಾ ಮಾಂಡ್ರೆಯವರೇ ಸಾಮಾಜಿಕ ಜಾಲತಾಣ ಟ್ವಿಟರ್ ಹಾಗೂ ಫೇಸ್’ಬುಕ್ ನಲ್ಲಿ ಮಾಹಿತಿ ನೀಡಿದ್ದಾರೆ.

ನಾನು ಮತ್ತು ನನ್ನ ಕುಟುಂಬದವರಿಗೆ ಕೋವಿಡ್‌-19 ಲಕ್ಷಣಗಳು ಕಂಡುಬಂದಿದ್ದು, ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ವೈರಸ್ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಐಸೋಲೇಷನ್ ನಲ್ಲಿರುವ ಆಯ್ಕೆ ಮಾಡಿಕೊಂಡಿದ್ದೇವೆ. ನಾನು ಕೂಡ ಕ್ವಾರಂಟೈನ್‌ ಆಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ಶರ್ಮಿಳಾ ಅವರು ಈ ಮಾಹಿತಿ ಹಂಚಿಕೊಳ್ಳುತ್ತಿದ್ದಂತೆಯೇ ಅವರ ಅಭಿಮಾನಿಗಳು ಶೀಘ್ರಗತಿಯಲ್ಲಿ ಗುಣಮುಖ ಆಗಲಿ ಎಂದು ಹಾರೈಸಿದ್ದಾರೆ.

Comments are closed.