ಮನೋರಂಜನೆ

ಹಾಸ್ಯ ಕಲಾವಿದೆ ಭಾರತಿ ಸಿಂಗ್, ಪತಿ ಹರ್ಷ್ ಬಂಧನ; ತಪ್ಪೊಪ್ಪಿಕೊಂಡ ಆರೋಪಿಗಳಿಂದ ಏನೆಲ್ಲ ಸಿಕ್ಕಿದೆ ನೋಡಿ…

Pinterest LinkedIn Tumblr

ಮುಂಬೈ: ಡ್ರ#ಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ಕಲಾವಿದೆ ಭಾರತಿ ಸಿಂಗ್ ಹಾಗೂ ಪತಿ ಹರ್ಷ್ ಲಿಂಬಚಿಯಾ ಅವರನ್ನು ಬಂಧಿಸಲಾಗಿದ್ದು, ಬಂಧಿತರಿಬ್ಬರು ಡ್ರ#ಗ್ಸ್ ಸೇವನೆ ಮಾಡುತ್ತಿರೋದರ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ.

ಶನಿವಾರ ಬೆಳಗ್ಗೆ ಭಾರತಿ ಸಿಂಗ್ ನಿವಾಸ ಮತ್ತು ಪ್ರೊಡೆಕ್ಷನ್ ಕಚೇರಿತಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಎರಡೂ ಸ್ಥಳಗಳಿಂದ 86.5 ಗ್ರಾಂ ಗಾಂಜಾ ಲಭ್ಯವಾಗಿತ್ತು. ಈ ಹಿನ್ನೆಲೆ ವಿಚಾರಣೆಗಾಗಿ ದಂಪತಿಯನ್ನ ಎನ್‍ಸಿಬಿ ಕಚೇರಿಗೆ ಕರೆತರಲಾಗಿತ್ತು. 15 ಗಂಟೆ ವಿಚಾರಣೆ ನಡೆಸಿದ ಬಳಿಕ ರಾತ್ರಿ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿತ್ತು. ಇಂದು ಇಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ತಮ್ಮ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ನವೆಂಬರ್ 21ರಂದು ಮುಂಬೈನ ಖಾರದಂಡಾ ಇಲಾಖೆಯ 21 ವರ್ಷದ ಯುವಕನ ನಿವಾಸದ ಮೇಲೆ ದಾಳಿ ನಡೆಸಿ ಆತನನ್ನು ಬಂಧಿಸಲಾಗಿತ್ತು. ಯುವಕನಿಂದ 40 ಗ್ರಾಂ ಗಾಂ#ಜಾ ಮತ್ತು ಇನ್ನಿತರ ನಶೆ ಪದಾರ್ಥಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಇದೇ ಯುವಕ ವಿಚಾರಣೆ ವೇಳೆ ಭಾರತಿ ಸಿಂಗ್ ಹೆಸರು ಹೇಳಿದ್ದ. ಯುವಕನ ಹೇಳಿಕೆಯನ್ನಾಧರಿಸಿ ಅಧಿಕಾರಿಗಳು ಭಾರತಿ ನಿಒವಾಸದ ಮೇಲೆ ದಾಳಿ ನಡೆಸಿದ್ದರು ಎಂದು ವರದಿಯಾಗಿದೆ.

Comments are closed.