ಬೆಂಗಳೂರು: ಡ್ರಗ್ಸ್ ಪ್ರಕರಣದ ಮುಖ್ಯ ಆರೋಪಿ, ಚಿತ್ರನಟಿ ರಾಗಿಣಿ ದ್ವಿವೇದಿ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ಜಾಮೀನು ನೀಡಲು ರಾಜ್ಯ ಹೈ ಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ರಾಗಿಣಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ರಾಜ್ಯ ಹೈ ಕೋರ್ಟ್ ನವೆಂಬರ್ 3ರಂದು ವಜಾ ಮಾಡಿ ಆದೇಶ ನೀಡಿತ್ತು. ಇದೀಗ ಆ ಆದೇಶವನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 4ರಂದು ನಡೆಸಲಿದೆ. ಡ್ರಗ್ಸ್ ಜಾಲದಲ್ಲಿ ರಾಗಿಣಿ ಭಾಗಿಯಾಗಿರುವ ಆರೋಪದಲ್ಲಿ ಸೆಪ್ಟೆಂಬರ್ 4ರಂದು ಸಿಸಿಬಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.