ಮನೋರಂಜನೆ

ನಟಿ ವಿಜಯಶಾಂತಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆ

Pinterest LinkedIn Tumblr


ನವದೆಹಲಿ: ನಟಿ ವಿಜಯಶಾಂತಿ ಅವರು ಕಾಂಗ್ರೆಸ್‌ ತೊರೆದು (ಇಂದು) ಸೋಮವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಈ ಹಿಂದೆ ಅವರು ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದ್ದಾರೆ.

ಕೇಸರಿ ಪಕ್ಷ ಮಾತ್ರವೇ ತೆಲಂಗಾಣ ಜನರ ಆಕಾಂಕ್ಷೆಗಳನ್ನು ಈಡೇರಿಸಬಲ್ಲದು ಎಂದು ಅವರು ಇದೇ ವೇಳೆ ಪ್ರತಿಪಾದಿಸಿದ್ದಾರೆ.

ವಿಜಯಶಾಂತಿ ಅವರು 90ರ ದಶಕದಲ್ಲಿ ಬಿಜೆಪಿಯಿಂದಲೇ ತಮ್ಮ ರಾಜಕೀಯ ಪಯಣ ಶುರು ಮಾಡಿದ್ದರು. ನಂತರ ಟಿಆರ್‌ಎಸ್‌ ಮತ್ತು ಕಾಂಗ್ರೆಸ್‌ ಸೇರಿದ್ದರು. 54 ವರ್ಷದ ವಿಜಯಶಾಂತಿ ಸಂಸದೆಯೂ ಆಗಿದ್ದರು.

Comments are closed.