ಮನೋರಂಜನೆ

ಬಿಗ್ ಬಾಸ್ ಸೀಸನ್​ 8 ಆರಂಭಕ್ಕೆ ಮುಹೂರ್ತ ಫಿಕ್ಸ್ !

Pinterest LinkedIn Tumblr

ಕೊರೊನಾ ವೈರಸ್​ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ಕನ್ನಡ ಬಿಗ್​ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳುತ್ತಿದೆ.

ಕೊರೊನಾ ವೈರಸ್ ಕಾರಣದಿಂದ ಕನ್ನಡ ಬಿಗ್​ ಬಾಸ್​ ಸೀಸನ್​ 8 ಮುಂದೂಡಲ್ಪಟ್ಟಿತ್ತು. ಈಗ ಬಿಗ್​ ಬಾಸ್​ ಆರಂಭಕ್ಕೆ ಕೊನೆಗೂ ದಿನಾಂಕ ಫಿಕ್ಸ್​ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಕೂಡ ಆಗಿದೆ.

ಕೊರೊನಾ ವೈರಸ್​ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ಕನ್ನಡ ಬಿಗ್​ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳುತ್ತಿದೆ.

ಇದೇ ಫೆಬ್ರವರಿಯಿಂದ ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳಲಿದೆಯಂತೆ! ಈ ಬಗ್ಗೆ ಇಂದು ಅಧಿಕೃತ ಘೋಷಣೆ ಆಗಿದೆ. ಕಲರ್ಸ್​ ಕನ್ನಡ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಈ ಬಗ್ಗೆ ಫೇಸ್​ಬುಕ್​ನಲ್ಲಿ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ, ಸುದೀಪ್​ ಹೊಸ ಪೋಸ್ಟ್​ ಒಂದನ್ನು ಹಾಕಿದ್ದರು. ಈ ಪೋಸ್ಟ್​ನಲ್ಲಿ ಬಿಗ್​ ಬಾಸ್​ ಸೀಸನ್​ 8 ಪ್ರೋಮೋ ಶೂಟ್​ನಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದಿದ್ದರು. ಅಂದಹಾಗೆ, ಈ ಬಾರಿ ಬಿಗ್​ ಬಾಸ್ ಸೀಸನ್​ 8ರಲ್ಲಿ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎನ್ನುವ ಬಗ್ಗೆಯೂ ಚರ್ಚೆ ಜೋರಾಗಿದೆ.

Comments are closed.