ಮನೋರಂಜನೆ

ಸೆಲೆಬ್ರಿಟಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪ; ಮಸ್ತಾನ್ ಚಂದ್ರ ಸೇರಿದಂತೆ ಆಫ್ರಿಕಾ ಮೂಲದ ವ್ಯಕ್ತಿಯ ಬಂಧನ

Pinterest LinkedIn Tumblr

ಬೆಂಗಳೂರು: ಅಕ್ರಮವಾಗಿ ಮಾದಕ ವಸ್ತುಗಳ ಸಂಗ್ರಹ, ಮಾರಾಟ, ಕಳ್ಳಸಾಗಣೆ, ಸೇವನೆ ವಿರುದ್ಧ ನಗರ ಅಪರಾಧ ವಿಭಾಗ ಪೊಲೀಸರ ಬೇಟೆ ಮುಂದುವರಿದಿದೆ.

ಸೆಲೆಬ್ರಿಟಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ಮಸ್ತಾನ್ ಚಂದ್ರ ಸೇರಿದಂತೆ ಆಫ್ರಿಕಾ ಮೂಲದ ವ್ಯಕ್ತಿಯನ್ನು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗೋವಿಂದಪುರ ಬಳಿಯ ಸಂಜಯನಗರದಲ್ಲಿ ಆತನ ನಿವಾಸದಿಂದ ಮಸ್ತಾನ್ ಚಂದ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡ ಬಿಗ್ ಬಾಸ್ ಶೋದ 4ನೇ ಆವೃತ್ತಿಯ ಸ್ಪರ್ಧಿಯಾಗಿದ್ದ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದು, ಕೆಲ ಕನ್ನಡ ಸಿನೆಮಾಗಳಲ್ಲಿ ಕೂಡ ನಟಿಸಿದ್ದ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಆಫ್ರಿಕಾ ಮೂಲದ ಡ್ರಗ್ ಪೆಡ್ಲರ್ ನನ್ನು ಹೆಣ್ಣೂರು ಬಳಿ ಬಂಧಿಸಿ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ 500 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಗರ ಅಪರಾಧ ವಿಭಾಗ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಸಿಸಿಬಿ ಪೊಲೀಸರು ಇಂದು ಆಫ್ರಿಕಾ ಮೂಲದ ಡ್ರಗ್ ಪೆಡ್ಲರ್ ನನ್ನು ಬಂಧಿಸಿ 40 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ ನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ವಿದ್ಯಾರ್ಥಿ ವೀಸಾ ಮೇಲೆ ಬೆಂಗಳೂರಿಗೆ ಬಂದಿದ್ದು ವೀಸಾ ಷರತ್ತನ್ನು ಉಲ್ಲಂಘಿಸಿ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ, ಈತನ ವಿರುದ್ಧ ವಿದೇಶಿ ಕಾಯ್ದೆ ಮತ್ತು ಎನ್ ಡಿಪಿಎಸ್ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Comments are closed.