ಮನೋರಂಜನೆ

ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ 133 ವರ್ಷ ಹಳೆಯ ಸರ್ಕಾರಿ ಶಾಲೆ ದತ್ತು ಪಡೆದ ಕಿಚ್ಚ ಸುದೀಪ್

Pinterest LinkedIn Tumblr

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್‍ವರು 133 ವರ್ಷ ಹಳೆಯ ಶಾಲೆಯನ್ನು ದತ್ತು ಪಡೆಯುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ದತ್ತು ಪಡೆದುಕೊಂಡಿದೆ. ಈ ಶಾಲೆ ಅಂದಾಜು 133 ವರ್ಷಗಳಷ್ಟು ಹಳೆಯದು ಎನ್ನಲಾಗಿದೆ. ಶಾಲೆಗಾಗಿ ನಾವು ನೀವು ಯೋಜನೆ ಅಡಿಯಲ್ಲಿ ಇದನ್ನು ದತ್ತು ಪಡೆಯಲಾಗಿದೆ. ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವಂತಹ ಕೆಲಸಗಳನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಮಾಡಲಿದೆ.

ಈ ಹಿಂದೆ ಕೂಡ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೆಲವು ಶಾಲೆಗಳನ್ನು ದತ್ತು ಪಡೆಯಲಾಗಿತ್ತು. ಹಲವು ಸರ್ಕಾರಿ ಶಾಲೆಗಳು ಅಳಿವಿನ ಅಂಚಿನಲ್ಲಿವೆ. ಮಕ್ಕಳ ಸಂಖ್ಯೆ ಕೊರತೆಯ ಕಾರಣ ನೀಡಿ ಕೆಲವೆಡೆ ಶಾಲೆಗಳನ್ನು ಮುಚ್ಚಲಾಗಿದೆ. ಇದರಿಂದ ಬಡಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಲಿದೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಅನೇಕ ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ.

Comments are closed.