
ಕಾನ್ಪುರ: ಜಮ್ಮುವಿನ ಉರಿ ಸೆಕ್ಟರ್ ಸೇನಾ ಪ್ರಧಾನ ಕಚೇರಿ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
500ನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಳಿಕ ಮಾತನಾಡಿರುವ ಅವರು, ಉರಿ ಉಗ್ರ ದಾಳಿಯಿಂದ ಸಾಕಷ್ಟು ನೋವಾಗಿದೆ. ಹುತಾತ್ಮ ಯೋಧರ ಕುಟುಂಬಸ್ಥರ ನೋವನ್ನು ಊಹಿಸಿಕೊಳ್ಳುವುದಕ್ಕೂ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಈ ರೀತಿಯ ದೊಡ್ಡ ಘಟನೆಗಳು ನಡೆದಾಗ ಸಾಮಾನ್ಯವಾಗಿಯೇ ನೋವಾಗುತ್ತದೆ. ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬದ ನೋವನ್ನು ಊಹಿಸಿಕೊಳ್ಳುವುದಕ್ಕೂ ಆಗುವುದಿಲ್ಲ. ದೇಶದಲ್ಲಿರುವ ಪ್ರತೀಯೊಬ್ಬ ಭಾರತೀಯನಿಗೂ ಘಟನೆ ನೋವನ್ನು ತಂದಿದೆ. ಹುತಾತ್ಮ ಯೋಧರಿಗೆ ಈ ಮೂಲಕ ಶ್ರದ್ಧಾಂಜಲಿಯನ್ನು ಅರ್ಪಿಸುತ್ತೇನೆ. ಯೋಧರ ಕುಟುಂಬಸ್ಥರಿಗೆ ಸಂತಾಪವನ್ನು ಸೂಚಿಸಿತ್ತೇನೆಂದು ತಿಳಿಸಿದ್ದಾರೆ.
Comments are closed.