ಕ್ರೀಡೆ

ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಠಾಕೂರ್ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ

Pinterest LinkedIn Tumblr

anurag-thakur

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಅನುರಾಗ್ ಠಾಕೂರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸಿದ್ದ ನ್ಯಾ.ಲೋಧಾ ಸಮಿತಿ ನೀಡಿದ್ದ ಶಿಫಾರಸ್ಸುಗಳನ್ನು ಜಾರಿ ಮಾಡದ ಹಿನ್ನಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸಲಾಗಿದೆ. ಅಂತೆಯೇ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಬಿಸಿಸಿಐ ಉಪಾಧ್ಯಕ್ಷರನ್ನು ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಅಂತೆಯೇ ಲೋಧಾ ಸಮಿತಿ ಶಿಫಾರಸ್ಸುಗಳನ್ನು ಜಾರಿ ಮಾಡುವಂತೆ ಆದೇಶವಿದ್ದರೂ, ಶಿಫಾರಸ್ಸುಗಳನ್ನು ಜಾರಿ ಮಾಡದ ಬಿಸಿಸಿಐ ವಿರುದ್ಧ ನ್ಯಾಯಾಂಗ ನಿಂದನೆ ಏಕೆ ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಅಂತೆಯೇ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಕಾರ್ಯದರ್ಶಿ ಅಜಯ್ ಶಿರ್ಕೆ ಅವರಿಗೆ ಸುಪ್ರೀಂ ಕೋರ್ಟ್ ಷೋಕಾಸ್ ನೋಟಿಸ್ ಜಾರಿ ಮಾಡಿದ್ದು, ನಿಮ್ಮ ವಿರುದ್ಧ ನಾವೇಕೆ ತನಿಖೆಗೆ ಆದೇಶಿಸಬಾರದು? ಎಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಪ್ರಶ್ನಿಸಿದೆ. ಅಲ್ಲದೆ ಸುಪ್ರೀಂ ಕೋರ್ಟ್ ಕೇಳುವ ಪ್ರಶ್ನೆಗಳಿಗೆ ಕಡ್ಡಾಯವಾಗಿ ಉತ್ತರಿಸಬೇಕು ಎಂದು ಹೇಳಿದೆ.

ಅಂತೆಯೇ ಮುಂದಿನ ವಿಚಾರಣೆಯನ್ನು ಜನವರಿ 19ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ಸುಪ್ರೀಂ ಕೋರ್ಟ್ ನಡೆಯಿಂದ ಬಿಸಿಸಿಐಗೆ ಭಾರಿ ಹಿನ್ನಡೆಯಾಗಿದ್ದು, ಬಿಸಿಸಿಐ ಮೇಲೆ ಇದೀಗ ನ್ಯಾಯಾಂಗ ನಿಂದನೆ ತೂಗುಗತ್ತಿ ತೂಗುವಂತಾಗಿದೆ.

Comments are closed.