ಕ್ರೀಡೆ

ಧೋನಿ ಕ್ರಿಕೆಟ್ ಗೆ ವಿದಾಯ ಹೇಳಿದ್ದರೆ ಅವರ ಮನೆ ಮುಂದೆ ಧರಣಿ ಮಾಡುತ್ತಿದ್ದೆ: ಗವಾಸ್ಕರ್

Pinterest LinkedIn Tumblr

ನವದೆಹಲಿ: ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿ ನಾಯಕತ್ವಕ್ಕೆ ವಿದಾಯ ಹೇಳಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್, ಧೋನಿ ಕ್ರಿಕೆಟ್ ಗೆ ವಿದಾಯ ಹೇಳಿದ್ದರೆ ಅವರ ಮನೆ ಮುಂದೆ ಧರಣಿ ಮಾಡುತ್ತಿದ್ದೆ ಎಂದು ಹೇಳಿದ್ದಾರೆ.

ಧೋನಿ ಪ್ರತಿಭಾನ್ವಿತ ಆಟಗಾರನಾಗಿದ್ದು ಅವರಲ್ಲಿ ಇನ್ನೂ ಸಾಕಷ್ಟು ಉತ್ತಮ ಆಟ ಉಳಿದಿದೆ. ಈಗಲೂ ಅವರು ಯಾವುದೇ ಹಂತದಲ್ಲಿ ಪಂದ್ಯದ ಗತಿಯನ್ನು ಬದಲಾಯಿಸುವ ಶಕ್ತಿ ಹೊಂದಿದ್ದಾರೆ ಎಂದು ಹೇಳಿದರು.

ಟೀಂ ಇಂಡಿಯಾಗೆ ಧೋನಿಯ ಅಗತ್ಯ ಇದೆ. ಇನ್ನಷ್ಟು ವರ್ಷಗಳ ಕಾಲ ಅವರು ತಂಡದಲ್ಲಿ ನಿಶ್ಚಿಂತೆಯಿಂದ ಆಡಬಹುದು. ಇದೀಗ ನಾಯಕತ್ವದ ಜವಾಬ್ದಾರಿ ಕಡಿಮೆಯಾಗಿರುವುದರಿಂದ ಯಾವುದೇ ತೊಂದರೆಯಿಲ್ಲದೆ ವಿಕೆಟ್ ಕೀಪಿಂಗ್ ಮತ್ತು ಬ್ಯಾಟಿಂಗ್ ಮಾಡಬಹುದು ಎಂದು ಸುನೀಲ್ ಗವಾಸ್ಕರ್ ಹೇಳಿದ್ದಾರೆ.

Comments are closed.