ಕ್ರೀಡೆ

ಅಮೃತಸರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ನವಜೋತ್ ಸಿಂಗ್ ಸಿದು

Pinterest LinkedIn Tumblr

ಅಮೃತ ಸರ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅಮೃತ ಸರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ಮುಖಂಡ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಸಿದು ಈಗಾಗಲೇ ಕಾಂಗ್ರೆಸ್ ನಲ್ಲಿದ್ದಾರೆ. ಶೇಕಡ ನೂರಕ್ಕೆ ನೂರರಷ್ಟು ಅವರೇ ಅಮೃತಸರದ ಕಾಂಗ್ರೆಸ್ ಅಭ್ಯರ್ಥಿ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಿಧು ಪತ್ನಿ ನವಜೋತ್ ಕೌರ್ ಈಗಾಗಲೇ ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಸಿಧು ಕಾಂಗ್ರೆಸ್ ಸೇರಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಗುರುವಾರ ನವಜೋತ್ ಸಿಂಗ್ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಶುಕ್ರವಾರ ಕಾಂಗ್ರೆಸ್ ಪಕ್ಷ ಪಂಜಾಬ್ ವಿಧಾನ ಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ನವಜೋತ್ ಸಿಧು ಹೆಸರು ನಾಪತ್ತೆಯಾಗಿದೆ.

ಫೆಬ್ರವರಿ 4 ರಂದು ಕಾಂಗ್ರೆಸ್ ಮತ್ತೊಂದು ಸುತ್ತಿನ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ.

Comments are closed.