ಕ್ರೀಡೆ

ಮದುವೆಗಾಗಿ ಕ್ರಿಕೆಟ್‌ನಿಂದ ‘ಬ್ರೇಕ್’ ತೆಗೆದುಕೊಳ್ಳುತ್ತಿದ್ದಾರಾ ವಿರಾಟ್ ಕೊಹ್ಲಿ?

Pinterest LinkedIn Tumblr


ದಾಂಪತ್ಯ ಜೀವನಕ್ಕೆ ಕಾಲಿಡುವ ಸಲುವಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಡಿಸೆಂಬರ್ ತಿಂಗಳಲ್ಲಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.

ಈ ಮಧ್ಯೆ ಟೀಂ ಇಂಡಿಯಾ ಆಯ್ಕೆ ಸಮಿತಿಯ ಮುಖ್ಯಸ್ಥ ಎಂಎಸ್ಕೆ ಪ್ರಸಾದ್ ಅವರು ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಆಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಕೆಲಸದ ಒತ್ತಡವನ್ನು ನಾವು ಗಮನಿಸುತ್ತಿದ್ದೇವೆ. ಐಪಿಎಲ್ ನಿಂದ ಹಿಡಿದು ಇಲ್ಲಿಯವರೆಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಇಲ್ಲದೆ ಆಡುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯದ ಬಳಿಕ ಅವರಿಗೆ ವಿಶ್ರಾಂತಿ ನೀಡಲು ನಾವು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ನವೆಂಬರ್ 16ರಿಂದ ಕೋಲ್ಕತ್ತಾದಲ್ಲಿ ಶ್ರೀಲಂಕಾ ಮತ್ತು ಭಾರತ ನಡುವಿನ ಮೊದಲ ಟೆಸ್ಟ್ ಪಂದ್ಯ ನಡೆಯಲಿದ್ದು ಹಿನ್ನೆಲೆಯಲ್ಲಿ ಲಂಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕಾಗಿ ಇಂದು ಮುಂಬೈನಲ್ಲಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು ಈ ವೇಳೆ ಕೊಹ್ಲಿಗೆ ವಿಶ್ರಾಂತಿ ನೀಡುವ ಕುರಿತು ಹೇಳಿದರು.

ಆಸಕ್ತಿಕರ ಸಂಗತಿಯೆಂದರೆ ಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗಾಗಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು ಮೂರನೇ ಪಂದ್ಯಕ್ಕೆ ಭಾರತ ತಂಡವನ್ನು ಸದ್ಯ ಪ್ರಕಟಿಸಿಲ್ಲ. ಮೂರನೇ ಟೆಸ್ಟ್ ಪಂದ್ಯ ಡಿಸೆಂಬರ್ 2ರಿಂದ ಪ್ರಾರಂಭವಾಗಲಿದ್ದು ಕೊಹ್ಲಿಗೆ ವಿಶ್ರಾಂತಿ ನೀಡುವ ಸಲುವಾಗಿಯೇ ಮೂರನೇ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಡಿಸೆಂಬರ್ ತಿಂಗಳಲ್ಲಿ ವಿಶ್ರಾಂತಿ ತೆಗೆದುಕೊಂಡು ವಿರಾಟ್ ಕೊಹ್ಲಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾರ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಪ್ರಶ್ನೆ ಮೂಡಿದ್ದು ಈ ಸಂಗತಿ ಇದೀಗ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

Comments are closed.