ಕ್ರೀಡೆ

ನೆಹ್ರಾಗೆ ವಿದಾಯದ ಪಂದ್ಯ ಅವಕಾಶವಿಲ್ಲವೇ?

Pinterest LinkedIn Tumblr


ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಹಿರಿಯ ಅನುಭವಿ ಎಡಗೈ ವೇಗಿ ಆಶಿಶ್ ನೆಹ್ರಾ ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಅಲ್ಲದೆ ನ್ಯೂಜಿಲೆಂಡ್ ವಿರುದ್ಧ ತವರಿನ ದಿಲ್ಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯ ತಮ್ಮ ಕ್ರಿಕೆಟ್ ಜೀವನದ ಕಟ್ಟಕಡೆಯ ಪಂದ್ಯವಾಗಿರಲಿದೆ ಎಂದು ಹೇಳಿದ್ದರು.

ನೆಹ್ರಾಗೆ ವಿದಾಯದ ಪಂದ್ಯ ಆಡುವ ಅವಕಾಶ ಸಿಗುವುದೇ ಎಂಬುದೀಗ ಸಂದೇಹಕ್ಕೀಡು ಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್, ಈ ಬಗ್ಗೆ ಅಂತಿಮ ನಿರ್ಧಾರವನ್ನು ತಂಡದ ಮ್ಯಾನೇಜ್‌ಮೆಂಡ್ ನಿರ್ಧರಿಸಲಿದೆ ಎಂದಿದ್ದಾರೆ.

38ನೇ ಹರೆಯದ ನೆಹ್ರಾ ಅವರನ್ನು ದಿಲ್ಲಿ ಪಂದ್ಯಕ್ಕಾಗಿ ತಂಡಕ್ಕೆ ಆರಿಸಲಾಗಿದೆ. ಆದರೆ ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆಯೇ ಎಂಬುದು ಟೀಮ್ ಮ್ಯಾನೇಜ್‌ಮೆಂಟ್ ನಿರ್ಧಾರವನ್ನು ಅವಲಂಬಿತವಾಗಿರಲಿದೆ. ಈ ಬಗ್ಗೆ ಆಯ್ಕೆಗಾರರಿಂದ ಗ್ಯಾರಂಟಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಗೆ ಭಾರತ ತಂಡ: ವಿರಾಟ್‌ ಕೊಹ್ಲಿ(ನಾಯಕ), ರೋಹಿತ್‌ ಶರ್ಮಾ(ಉಪನಾಯಕ), ಶಿಖರ್‌ ಧವನ್‌, ಕೆ.ಎಲ್‌ ರಾಹುಲ್‌, ಮನೀಶ್‌ ಪಾಂಡೆ, ಶ್ರೇಯಸ್‌ ಅಯ್ಯರ್‌, ಎಂ.ಎಸ್‌ ಧೋನಿ(ವಿಕೆಟ್‌ ಕೀಪರ್‌), ದಿನೇಶ್‌ ಕಾರ್ತಿಕ್‌, ಹಾರ್ದಿಕ್‌ ಪಾಂಡ್ಯ, ಅಕ್ಷ ರ್‌ ಪಟೇಲ್‌, ಕುಲ್‌ದೀಪ್‌ ಯಾದವ್‌, ಯುಜ್ವೇಂದ್ರ ಚಹಾಲ್‌, ಭುವನೇಶ್ವರ್‌ ಕುಮಾರ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಆಶಿಶ್‌ ನೆಹ್ರಾ(ಮೊದಲ ಪಂದ್ಯಕ್ಕೆ ಮಾತ್ರ).

Comments are closed.