ಕ್ರೀಡೆ

ಭಾರತ-ಪಾಕ್ ಕ್ರಿಕೆಟ್ ಪಂದ್ಯ ಕೇವಲ ಕ್ರೀಡೆಯಲ್ಲ, ಅದಕ್ಕಿಂತ ಹೆಚ್ಚು: ಎಂಎಸ್ ಧೋನಿ

Pinterest LinkedIn Tumblr

ಶ್ರೀನಗರ: ಭಾರತ-ಪಾಕಿಸ್ತಾನ ನಡುವಿನ ಪಂದ್ಯಗಳು ಕೇವಲ ಕ್ರೀಡೆಯಲ್ಲ. ಅದಕ್ಕಿಂತಲೂ ಹೆಚ್ಚು ಎಂದು ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

ಕಳೆದ ಹಲವು ವರ್ಷಗಳಿಂದ ಭಾರತ ಮತ್ತು ಪಾಕಿಸ್ತಾನ ನಡುವೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿಗಳು ನಡೆದಿಲ್ಲ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳು ಒಂದು ಯುದ್ಧಕ್ಕೆ ಸಮಾ ಎಂಬ ಅರ್ಥದಲ್ಲಿ ಎಂಎಸ್ ಧೋನಿ ಹೇಳಿದ್ದಾರೆ.

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ದಿನಗಳಿಂದ ವಾಸ್ತವ್ಯ ಹೂಡಿರುವ ಧೋನಿ ನಿನ್ನೆ ಬಾರಾಮುಲ್ಲಾದ ಕುನ್ಜಾರ್ ಪ್ರದೇಶದಲ್ಲಿ ಯೋಧರು ಆಯೋಜಿಸಿದ್ದ ಕ್ರಿಕೆಟ್ ಪಂದ್ಯದಲ್ಲಿ ಭಾಗಿಯಾಗಿ ಮಾತನಾಡಿದರು.

ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ಸಂಬಂಧಿಸಿದಂತೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದ್ದು ನಾವು ಆಡುವುದು ಬಿಡುವುದರ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

Comments are closed.