ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾರ ಈ ವೀಡಿಯೋವನ್ನೊಮ್ಮೆ ನೋಡಿ….
ಮಿಲನ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಸೋಮವಾರ ದಕ್ಷಿಣ ಇಟಲಿಯ ಮಿಲನ್ ನಗರದಲ್ಲಿ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮಿಲನ್ ನಗರದಲ್ಲಿ ನಡೆದ ವಿರುಷ್ಕಾ ಮದುವೆಯಲ್ಲಿ ಇಬ್ಬರ ಕುಟುಂಬ ಸದಸ್ಯರು ಹಾಗೂ ಕಲವೇ ಕೆಲವು ಆಪ್ತರು ಮಾತ್ರ ಭಾಗವಹಿಸಿದ್ದರು ಎನ್ನಲಾಗುತ್ತಿದೆ.
ಟೀಂ ಇಂಡಿಯಾ ಆಯ್ಕೆ ಸಮಿತಿ ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಭಾರತೀಯ ಕ್ರಿಕೆಟಿಗರು ಲಂಕಾ ವಿರುದ್ಧ ಏಕದಿನ ಮತ್ತು ಟಿ20 ಸರಣಿಯಲ್ಲಿ ಭಾಗಿಯಾಗುತ್ತಿರುವ ಕಾರಣ ಕೊಹ್ಲಿಗೆ ಮದುವೆಗೆ ಗೈರಾಗಿದ್ದಾರೆ.
ಆದರೆ ಇದೇ ಡಿಸೆಂಬರ್ 21ರಂದು ಮುಂಬೈನಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭ ಹಾರೈಸುವ ಸಾಧ್ಯತೆ ಇದೆ.
Comments are closed.