
ಮೊಹಾಲಿ: ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭರ್ಜರಿ ದ್ವಿಶತಕ ಸಿಡಿಸಿದ್ದಾರೆ.
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಮಾಡಿ 3ನೇ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.
ಸ್ಫೋಟಕ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ 153 ಎಸೆತದಲ್ಲಿ 12 ಸಿಕ್ಸರ್, 13 ಬೌಂಡರಿ ಸೇರಿದಂತೆ ಅಜೇಯ 208 ರನ್ ಸಿಡಿಸಿದರು. ಮೊದಲ 100 ರನ್ 115 ಎಸತೆಗಳನ್ನು ತೆಗೆದುಕೊಂಡಿದ್ದ ರೋಹಿತ್ ಶರ್ಮಾ ನಂತರದ ಶತಕವನ್ನು ಕೇವಲ 36 ಎಸೆತಗಳಲ್ಲಿ ಸಿಡಿಸಿದ್ದಾರೆ.
ಇನ್ನು ರೋಹಿತ್ ಶರ್ಮಾ ವೈಯಕ್ತಿಕ ಗರಿಷ್ಠ ರನ್ ಅನ್ನು ಲಂಕಾ ವಿರುದ್ಧವೇ ಬಾರಿಸಿದ್ದರು. ಕೊಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದಿದ್ದ ಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 264 ರನ್ ಬಾರಿಸಿ ವಿಶ್ವ ದಾಖಲೆ ಬರೆದಿದ್ದರು.
Comments are closed.