ಕ್ರೀಡೆ

ಕೊಹ್ಲಿ ಅಬ್ಬರ…ಅಂತಿಮ ಪಂದ್ಯದಲ್ಲೂ ಆಫ್ರಿಕಾ ವಿರುದ್ಧ ಗೆದ್ದ ಟೀಂ ಇಂಡಿಯಾ

Pinterest LinkedIn Tumblr

ಸೆಂಚುರಿಯನ್(ದಕ್ಷಿಣ ಆಫ್ರಿಕಾ): ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಆರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲೂ ಪ್ರವಾಸಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.

ಸೆಂಚುರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇದರಿಂದಾಗಿ ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ಆಟಗಾರರು ಭಾರತೀಯ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ್ದು 204 ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. 205 ರನ್ ಗಳ ಸುಲಭ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 206 ರನ್ ಬಾರಿಸಿ ಗುರಿ ಮುಟ್ಟಿತ್ತು.

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 96 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಹಾಗೂ 19 ಬೌಂಡರಿಗಳು ಸೇರಿದಂತೆ 129 ರನ್ ಬಾರಿಸಿದ್ದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಭಾರತ ಪರ ರೋಹಿತ್ ಶರ್ಮಾ 15, ಶಿಖರ್ ಧವನ್ 18 ಹಾಗೂ ಅಜಿಂಕ್ಯ ರಹಾನೆ ಅಜೇಯ 34 ರನ್ ಗಳಿಸಿದ್ದಾರೆ.

ಆಫ್ರಿಕಾ ಪರ ಮಾರ್ಕ್ರಾಮ್ 24, ಎಬಿಡಿ ವಿಲಿಯರ್ಸ್ 30, ಜೋಂಡಾ 54 ಮಾರ್ಕೆಲ್ 20 ಫೆಹ್ಲುಕ್ವೇವೊ 34 ರನ್ ಗಳಿಸಿದ್ದಾರೆ.

ಭಾರತ ಪರ ಶಾದ್ರೂಲ್ ಠಾಕೂರ್ 4, ಬುಮ್ರಾ, ಚಹಾಲ್ ತಲಾ 2, ಪಾಂಡ್ಯ ಮತ್ತು ಕುಲ್ದೀಪ್ ತಲಾ 1 ವಿಕೆಟ್ ಪಡೆದಿದ್ದಾರೆ.

ಆರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 5-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ.

Comments are closed.