ಸೆಂಚುರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ 6 ಏಕದಿನ ಪಂದ್ಯಗಳ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯ ಸಿಡಿಲಬ್ಬರದ ಬ್ಯಾಟಿಂಗ್ಗೆ ಪಾಕಿಸ್ತಾನದ ಮಹಿಳಾ ಕ್ರಿಕೆಟರ್ಗಳು ಫಿದಾ ಆಗಿದ್ದು, ಕೊಹ್ಲಿ ಆಟವನ್ನು ಹೊಗಳಿದ್ದಾರೆ.
ಪಾಕಿಸ್ತಾನದ ಮಹಿಳಾ ಕ್ರಿಕೆಟರ್ಗಳಾದ ಸಯೀದಾ ನೈನ್ ಅಬಿದಿ ಮತ್ತು ಕೈನತ್ ಇಮ್ತಿಯಾಜ್ ಅವರು ಕೊಹ್ಲಿಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ. ಅಬಿದಿ ಅವರು ಕೊಹ್ಲಿ ಏಕಾಗ್ರತೆ ಹೊಂದಿರುವ ಅತ್ಯುತ್ತಮ ಬ್ಯಾಟ್ಸ್ಮನ್, ಸೆಂಚುರಿಯನ್ನಲ್ಲಿ ಅವರ ಬ್ಯಾಟಿಂಗ್ ಅತ್ಯುತ್ತಮವಾಗಿತ್ತು ಎಂದು ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಕೈನತ್ ಸಹ ಕೊಹ್ಲಿಯನ್ನು ಮುಕ್ತಕಂಠದಿಂದ ಹೊಗಳಿದ್ದಾರೆ.