ಕ್ರೀಡೆ

ಅನುಷ್ಕಾ ಜೊತೆಗಿನ ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಮ್‌ ಫೋಟೋಗೆ ವೀಕ್ಷಕರು ಫಿದಾ!

Pinterest LinkedIn Tumblr


ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜತೆಗಿನ ಫೋಟೋವೊಂದನ್ನು ಇನ್‌ಸ್ಟಾಗ್ರಾಮ್‌ ನಲ್ಲಿ ಪೋಸ್ಟ್ ಮಾಡಿದ್ದು ಇದಕ್ಕೆ ವೀಕ್ಷಕರು ಫಿದಾ ಆಗಿದ್ದಾರೆ.

ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಜತೆಗಿನ ಆತ್ಮೀಯ ಅಪ್ಪುಗೆಯ ಫೋಟೋವನ್ನು ಇನ್‌ಸ್ಟಾಗ್ರಾಮ್‌ ನಲ್ಲಿ ಪೋಸ್ಟ್ ಮಾಡಿದ್ದು ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಫೋಟೋ ಜತೆಗೆ ವಿರಾಟ್ ಕೊಹ್ಲಿ ಮೈ ಒನ್ ಅಂಡ್ ಒನ್ಲಿ ಎಂದು ಅಡಿ ಬರಹ ನೀಡಿದ್ದಾರೆ. ಫೋಟೋ ಅಪ್ಲೋಡ್ ಆದ ಒಂದು ಗಂಟೆಯಲ್ಲೇ 7.3 ಲಕ್ಷ ಮಂದಿ ಲೈಕ್ ಮಾಡಿದ್ದು ಕಮೆಂಟ್ ಗಳನ್ನು ಮಾಡುತ್ತಿದ್ದಾರೆ.

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಇದು ವರ್ಷದ ಅದ್ಧೂರಿ ವಿವಾಹವಾಗಿತ್ತು.

Comments are closed.