ಕ್ರೀಡೆ

ಮೊಹಮದ್ ಶಮಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ

Pinterest LinkedIn Tumblr

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮದ್ ಶಮಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಕಾರಣ ತೀವ್ರವಾಗಿ ಗಾಯಗೊಂಡಿದ್ದಾರೆ.

ಡೆಹ್ರಾಡೂನ್’ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದು 10 ಹೊಲಿಗೆ ಹಾಕಲಾಗಿದೆ. ಶಮಿ ವಿರುದ್ಧ ಕೆಲ ದಿನಗಳ ಹಿಂದೆ ಪತ್ನಿ ಹಸೀನಾ ಜಹಾನ್ ಕಿರುಕುಳ, ಮ್ಯಾಚ್ ಫಿಕ್ಸಿಂಗ್ ಆರೋಪ ಹೊರಿಸಿದ್ದರು.

ಕೋಲ್ಕತ್ತಾ ಪೊಲೀಸರು ಈಗಾಗಲೆ ತನಿಖೆ ಕೈಗೊಂಡಿದ್ದು ಬಿಸಿಸಿಐ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಬಿಸಿಸಿಐನ ಭ್ರಷ್ಟಾಚಾರ ತನಿಖಾ ಘಟಕ ಕ್ಲೀನ್ ಚಿಟ್ ನೀಡಿತ್ತು. ಶಮಿ ಐಪಿಎಲ್’ನಲ್ಲಿ ಡೇರ್’ಡೇವಿಲ್ ಪರ ಆಡಲಿದ್ದಾರೆ.

Comments are closed.