ಕ್ರೀಡೆ

ವಾಟ್ಸನ್ ಅಬ್ಬರ…ಚೆನ್ನೈ ಸೂಪರ್ ಕಿಂಗ್ಸ್ ಗೆ ಭರ್ಜರಿ ಜಯ

Pinterest LinkedIn Tumblr

ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 64 ರನ್ ಗಳ ಅಂತರದಲ್ಲಿ ಭರ್ಜರಿಯಾಗಿ ಸೋಲಿಸಿದೆ.

ಚೆನ್ನೈ ನೀಡಿದ್ದ 205 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ರಾಜಸ್ಥಾನ ರಾಯಲ್ಸ್ ತಂಡ 18.3 ಓವರ್ ನಲ್ಲಿ ಕೇವಲ 140 ರನ್ ಗಳಿಸಿ ಆಲೌಟ್ ಆಯಿತು. ಆ ಮೂಲಕ ಚೆನ್ನೈ ಎದುರು 64 ರನ್ ಗಳ ಅಂತರದಲ್ಲಿ ತಲೆ ಬಾಗಿತು. ರಾಜಸ್ಥಾನ ಪರ ಆಲ್ ರೌಂಡರ್ ಬೆನ್ ಸ್ಟೋಕ್ಸ್ (46 ರನ್)ಅವರನ್ನು ಹೊರತು ಪಡಿಸಿದರೆ ಉಳಿದ ಯಾವ ಆಟಗಾರನೂ ಕೂಡ ಕ್ರೀಸ್ ನಲ್ಲಿ ಗಟ್ಟಿಯಾಗಿ ನಿಂತು ಆಡುವ ಪ್ರಯತ್ನ ಮಾಡಲಿಲ್ಲ. ಅಂತೆಯೇ ಬೌಲಿಂಗ್ ನಲ್ಲಿ ಸಾಂಘಿಕ ಹೋರಾಟ ತೋರಿದ ಚೆನ್ನೈ ಎದುರು ರಾಜಸ್ಥಾನ 64 ರನ್ ಗಳ ಅಂತರದಲ್ಲಿ ಮಂಡಿಯೂರಿತು.

ಇನ್ನು ಚೆನ್ನೈ ಪರ ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಡ್ವೇನ್ ಬ್ರಾವೋ, ಕೆ ಶರ್ಮಾ ತಲಾ 2 ವಿಕೆಟ್ ಪಡೆದರೆ, ಶೇನ್ ವಾಟ್ಸನ್ ಹಾಗೂ ಇಮ್ರಾನ್ ತಾಹಿರ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಆಟಗಾರ ಶೇನ್ ವಾಟ್ಸನ್ (106 ರನ್, 57 ಎಸೆತ) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ನಲ್ಲಿ 204 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ವಾಟ್ಸನ್ ಗೆ ಮಧ್ಯಮ ಕ್ರಮಾಂಕದ ಆಟಗಾರ ಸುರೇಶ್ ರೈನಾ (46ರನ್, 29 ಎಸೆತ) ಕೂಡ ಉತ್ತಮ ಸಾಥ್ ನೀಡಿದರು.

Comments are closed.