ಕರಾವಳಿ

ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋರವರಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ವಿಶೇಷ ಪ್ರಾರ್ಥನೆ

Pinterest LinkedIn Tumblr

ಮಂಗಳೂರು ಏಪ್ರಿಲ್ 23: ರಾಜ್ಯ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸಲಿರುವ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋರವರು ಇಂದು ಮನಪಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮೊದಲು ಇಂದು ಬೆಳಿಗೆ ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪಕ್ಷದ ಮುಖಂಡರಾದ ಟಿ.ಕೆ.ಸುಧೀರ್, ಪ್ರಕಾಶ್ ಸಾಲಿಯಾನ್, ಕಳ್ಳಿಗೆ ತಾರಾನಾಥ ಶೆಟ್ಟಿ, ರಮಾನಂದ ಬೋಳಾರ, ಮೋಹನ್ ಮೆಂಡನ್, ಪ್ರೇಮನಾಥ್ ಹಾಗೂ ಪಕ್ಷದ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

Comments are closed.