ಕ್ರೀಡೆ

ಸನ್ ರೈಸರ್ಸ್ ವಿರುದ್ಧ ಕಳಪೆ ಪ್ರದರ್ಶನ: ಹಾರ್ದಿಕ್ ಪಾಂಡ್ಯ ವಿರುದ್ಧ ಕಿಡಿಕಾರಿದ ಟ್ವೀಟರಿಗರು

Pinterest LinkedIn Tumblr

ಇಂಡಿಯಾನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿರುದ್ಧ ಅಭಿಮಾನಿಗಳು ತಿರುಗಿ ಬಿದ್ದಿದ್ದಾರೆ.

ಯಶಸ್ವಿ ಆಲ್ ರೌಂಡರ್ ಎನಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ನಿನ್ನೆ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಬೇಕಿತ್ತು. ಹೈದರಾಬಾದ್ ನೀಡಿದ ಅಲ್ಪಮೊತ್ತದ ಗುರಿಯನ್ನು ಬೆನ್ನಟ್ಟಿದ ಮುಂಬೈ ತಂಡ ಆರಂಭಿಕ ಆಘಾತ ಎದುರಿಸಿತು. ಜತೆಗೆ ಬಲಿಷ್ಠ ಬ್ಯಾಟಿಂಗ್ ಪಡೆ ದಿಢೀರ್ ಕುಸಿತ ಕಂಡಿತು. ಈ ವೇಳೆ ಬ್ಯಾಟಿಂಗ್ ಗೆ ಬಂದ ಹಾರ್ದಿಕ್ ಪಾಂಡ್ಯ 3 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇದರಿಂದ ರೊಚ್ಚಿಗೆದ್ದ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 118 ರನ್ ಗಳಿಗೆ ಆಲೌಟ್ ಆಗಿತ್ತು. 119 ರನ್ ಗಳ ಅಲ್ಪಮೊತ್ತ ಬೆನ್ನಟ್ಟಿದ ಮುಂಬೈ ತಂಡ 87 ರನ್ ಗಳಿಗೆ ಆಲೌಟ್ ಆಗುವ ಮೂಲಕ 31 ರನ್ ಗಳಿಂದ ಹೀನಾಯ ಸೋಲು ಕಂಡಿತ್ತು.

Comments are closed.