ಕ್ರೀಡೆ

ಶಿಖರ್ ಧವನ್, ಸ್ಮೃತಿ ಮಂದಾನಾ ಹೆಸರು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಶಿಫಾರಸು

Pinterest LinkedIn Tumblr

ಕೋಲ್ಕತ್ತಾ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹಾಗೂ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂದಾನಾ ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗಾಗಿ ಶಿಫಾರಸು ಮಾಡಲಾಗಿದೆ.

ಶಿಖರ್ ಧವನ್ ಹಾಗೂ ಸ್ಮೃತಿ ಮಂದಾನಾ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಅಮಿತ್ ಚೌಧರಿ ಹೇಳಿದ್ದಾರೆ.

ಕಳೆದ ಸಾಲಿನಲ್ಲಿ ಶಿಖರ್ ಧವನ್ ಟೀಂ ಇಂಡಿಯಾ ಪರ ಕ್ರಿಕೆಟ್ ನ ಮೂರು ಪ್ರಕಾರಗಳಲ್ಲೂ ಗಮನಾರ್ಹ ಪ್ರದರ್ಶನವನ್ನು ನೀಡಿದ್ದಾರೆ. ಅತ್ತ ಸ್ಮೃತಿ ಮಂದಾನ ಭಾರತೀಯ ಮಹಿಳಾ ತಂಡವು ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.

Comments are closed.