ಕ್ರೀಡೆ

ಸತತ 5ನೇ ಸೋಲು ಕಂಡ ಬೆಂಗಳೂರು; ಕೆಕೆಆರ್’ಗೆ ಜಯ

Pinterest LinkedIn Tumblr

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಐದನೇ ಸೋಲು ಕಂಡಿದೆ.

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡ 6 ವಿಕೆಟ್ ಗಳಿಂದ ಸೋಲು ಕಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 175 ರನ್ ಪೇರಿಸಿತ್ತು. ಗೆಲ್ಲಲ್ಲು 176 ರನ್ ಗಳ ಗುರಿ ಪಡೆದ ಕೋಲ್ಕತ್ತಾ ತಂಡ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಕೋಲ್ಕತ್ತಾ ಪರ ಸುನೀಲ್ ನರೈನ್ 27, ರಾಬಿನ್ ಉತ್ತಪ್ಪ 36, ದಿನೇಶ್ ಕಾರ್ತಿಕ್ 23 ಮತ್ತು ಲ್ಯಾನ್ ಅಜೇಯ 62 ರನ್ ಗಳಿಸಿದ್ದಾರೆ.

ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ 29, ಬ್ರೆಂಡಮ್ ಮೆಕಲಮ್ 38 ವಿರಾಟ್ ಕೊಹ್ಲಿ ಭರ್ಜರಿ ಅರ್ಧ ಶತಕ 68 ರನ್ ಬಾರಿಸಿದ್ದಾರೆ.

ಕೋಲ್ಕತ್ತಾ ಪರ ಆಂಡ್ಯೂ ರಸೇಲ್ 3 ಮತ್ತು ಕುಲದೀಪ್ ಯಾದವ್ 1 ವಿಕೆಟ್ ಪಡೆದಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ 7 ಪಂದ್ಯಗಳ ಪೈಕಿ 1 ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿದೆ.

Comments are closed.