
ಬೆಂಗಳೂರು: ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ತಂಡ ಪ್ಲೇ ಆಫ್ಗೆ ಅವಕಾಶ ಪಡೆಯಲು ವಿಫಲವಾಗಿದೆ. ಇದರ ಬೆನ್ನಲ್ಲೇ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಶಾಕಿಂಗ್ ನ್ಯೂಸ್ ಕೊಡಲು ಸಿದ್ಧತೆ ನಡೆಸಿದ್ದಾರೆ.
ಹೌದು ಶುಕ್ರವಾರ ಮಧ್ಯಾಹ್ನ 1.30 ಕ್ಕೆ ನಾನು ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬರಲಿದ್ದೇನೆ. ಪ್ರಮುಖವಾದ ವಿಷಯವೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇನೆ. ಎಂದು ವಿರಾಟ್ ತಮ್ಮ ಟ್ವಿಟರ್ ಖಾತೆಯಲ್ಲಿ ಸೆಲ್ಫಿ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.
ವಿಶ್ವ ಕ್ರಿಕೆಟ್ನಲ್ಲಿ ಮಿಂಚುತ್ತಿರುವ ವಿರಾಟ್ ಕೊಹ್ಲಿ ಆರ್ಸಿಬಿ ತಂಡವನ್ನು ಯಶಸ್ಸಿನ ಹಾದಿಯಲ್ಲಿ ಕರೆದೊಯ್ಯಲು ಮಾತ್ರ ವಿಫಲರಾಗಿದ್ದಾರೆ. ಸೋಲಿನಿಂದ ಕಂಗೆಟ್ಟಿರುವ ಕೊಹ್ಲಿ ಆರ್ಸಿಬಿ ನಾಯಕತ್ವ ತ್ಯಜಿಸುತ್ತಾರಾ? ಡೆಲ್ಲಿ ಡೇರ್ಡೆವಿಲ್ಸ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಹಾದಿ ತುಳಿಯುತ್ತಾರಾ? ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಕೊಹ್ಲಿ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ, ಅಭಿಮಾನಿಗಳೊಂದಿಗೆ ಹಂಚಿಕೊಳ್ಳಬೇಕೆಂದಿರುವ ಪ್ರಮುಖವಾದ ವಿಷಯವೇನು ಎಂಬುದನ್ನು ತಿಳಿಯಲು ಇಂದು ಮಧ್ಯಾಹ್ನದವರೆಗೂ ಕಾಯಲೇಬೇಕಿದೆ.
Comments are closed.