ಬೆಂಗಳೂರು: ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಅಮಿತ್ ಮಿಶ್ರಾ ಅವರು ಶುಕ್ರವಾರ ನಗರದ ಮೆಯೊಹಾಲ್ ಬಳಿಯ 43ನೇ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದಾರೆ.
2014ರಲ್ಲಿ ಬೆಂಗಳೂರಿನಲ್ಲಿ ತಾವು ತಂಗಿದ್ದ ಹೋಟೆಲ್‌ನಲ್ಲಿ ಯುವತಿ ಮೇಲೆ ಅಮಿತ್ ಮಿಶ್ರಾ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಯುವತಿ ಅಶೊಕನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಬಳಿಕ ಅಮಿತ್ ಮಿಶ್ರಾ ಅವರನ್ನು ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದರು. ಹಲವು ದಿನಗಳ ಬಳಿಕ ಜಾಮೀನು ಮೇಲೆ ಬಿಡುಗಡೆ ಆಗಿದ್ದರು. ಈಗ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.