ಕ್ರೀಡೆ

ಕ್ರಿಕೆಟ್ ಶಿಶು ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿ ವಿಶ್ವದಾಖಲೆ ಮಿಸ್ ಮಾಡಿಕೊಂಡ ಕೊಹ್ಲಿ

Pinterest LinkedIn Tumblr

ಡಬ್ಲಿನ್: ಟೀಂ ಇಂಡಿಯಾದ ಮತ್ತು ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರನ್ನು ಐರ್ಲೆಂಡ್ ತಂಡ ಡಕ್ಔಟ್ ಮಾಡಿದೆ.

ನಿನ್ನೆ ನಡೆದ ಪಂದ್ಯದಲ್ಲಿ ಭಾರತ ಐರ್ಲೆಂಡ್ ವಿರುದ್ಧ 76 ರನ್ ಗಳಿಂದ ಭರ್ಜರಿ ಜಯಗಳಿಸಿದೆ. ಭಾರತ ತನ್ನ 100ನೇ ಟಿ20 ಪಂದ್ಯದಲ್ಲಿ ಗೆಲುವಿನೊಂದಿಗೆ ಐತಿಹಾಸಿಕ ದಾಖಲೆ ಮಾಡಿದ್ದು ಇದೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೂಡ ಮತ್ತೊಂದು ವಿಶ್ವದಾಖಲೆ ಮಾಡುವ ಅವಕಾಶವಿತ್ತು. ಆದರೆ ಈ ಅವಕಾಶವನ್ನು ಬಳಸಿಕೊಳ್ಳುವುದರಲ್ಲಿ ಕೊಹ್ಲಿ ಎಡವಿದ್ದಾರೆ. ಎರಡನೇ ಎಸೆತದಲ್ಲಿ ಕ್ಯಾಚ್ ನೀಡಿ ಶೂನ್ಯಕ್ಕೆ ಔಟಾಗಿದ್ದಾರೆ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ 2 ಸಾವಿರ ರನ್ ಪೂರೈಸಲು ಕೊಹ್ಲಿಗೆ ಇನ್ನು 17 ರನ್ ಗಳ ಕೊರತೆಯಿತ್ತು. ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 17 ರನ್ ಬಾರಿಸಿದರೆ ಟಿ20 ಕ್ರಿಕೆಟ್ ನಲ್ಲೇ ಅತೀ ವೇಗವಾಗಿ 2000 ರನ್ ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಲಿದ್ದರು.

ಕೊಹ್ಲಿ 57 ಟಿ20 ಪಂದ್ಯಗಳನ್ನಾಡಿದ್ದು 53 ಇನ್ನಿಂಗ್ಸ್ ಗಳಿಂದ 50.84ರ ಸರಾಸರಿಯಲ್ಲಿ 1983 ರನ್ ಗಳಿಸಿದ್ದಾರೆ. ಈ ಸಾಧನೆ ಮಾಡಲು ಕೊಹ್ಲಿಗೆ ಇನ್ನು ಕೇವಲ 17 ರನ್ ಬೇಕಿದ್ದು ಐರ್ಲೆಂಡ್ ವಿರುದ್ಧ ಮತ್ತೊಂದು ಟಿ20 ಪಂದ್ಯವಿದ್ದು ಕೊಹ್ಲಿಗೆ ಮತ್ತೊಂದು ಅವಕಾಶವಿದೆ. ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿರುವ ಆಟಗಾರರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಏರಲಿದ್ದಾರೆ.

ಇನ್ನು ನ್ಯೂಜಿಲೆಂಡ್ ತಂಡದ ಆಟಗಾರ ಮಾರ್ಟಿನ್ ಗುಪ್ಟಿಲ್ 68 ಪಂದ್ಯಗಳಲ್ಲಿ 2271 ರನ್ ಗಳಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. 2140 ಗಳಿಸಿರುವ ಬ್ರೆಂಡನ್ ಮೆಕಲಮ್ ಎರಡನೇ ಸ್ಥಾನ ಹಾಗೂ 1989 ರನ್ ಬಾರಿಸುವ ಪಾಕಿಸ್ತಾನದ ಶೋಯೆಬ್ ಮಲ್ಲಿಕ್ ಮೂರನೇ ಸ್ಥಾನದಲ್ಲಿದ್ದಾರೆ.

Comments are closed.