ಕ್ರೀಡೆ

ಚೆಂಡು ವಿರೂಪ: ಶ್ರೀಲಂಕಾ ನಾಯಕ ದಿನೇಶ್, ಕೋಚ್ ಚಂಡಿಕಾಗೆ ನಿಷೇಧದ ಶಿಕ್ಷೆ

Pinterest LinkedIn Tumblr

ದುಬೈ: ವೆಸ್ಟ್‌ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀಲಂಕಾ ನಾಯಕ ದಿನೇಶ್ ಚಾಂಡಿಮಾಲ್, ಕೋಚ್ ಚಂಡಿಕಾ ಹತುರುಸಿಂಘೆ ಹಾಗೂ ಮ್ಯಾನೇಜರ್ ಅಸಂಕ ಗುರುಸಿನ್ಹಾ ಅವರಿಗೆ ನಾಲ್ಕು ಏಕದಿನ ಪಂದ್ಯ ಹಾಗೂ ಎರಡು ಟೆಸ್ಟ್ ಪಂದ್ಯಗಳಿಗೆ ನಿಷೇಧ ಹೇರಲಾಗಿದೆ.

ವೆಸ್ಟ್​ ಇಂಡೀಸ್ ಹಾಗೂ ಶ್ರೀಲಂಕಾ ನಡುವಣ ಟೆಸ್ಟ್​ ಪಂದ್ಯದ ವೇಳೆ ದಿನೇಶ್ ಚಂಡಿಮಾಲ್ ಅವರು ಚೆಂಡಿನ ಸ್ವರೂಪವನ್ನು ಬದಲಾವಣೆ ಮಾಡುವ ಮೂಲಕ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.2.9 ರ ಉಲ್ಲಂಘನೆ ಮಾಡಿದ್ದಾರೆ ಎಂದು ಐಸಿಸಿ ಹೇಳಿದೆ.

ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಈ ಮೂವರಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳಿಗೆ ನಿಷೇಧ ಹೇರಲಾಗಿದೆ.

ವೆಸ್ಟ್‌ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟದ ಅಂತ್ಯದಲ್ಲಿ ಶ್ರೀಲಂಕಾ ಕ್ರಿಕೆಟಿಗರು ಚೆಂಡು ವಿರೂಪಗೊಳಿಸಿದ್ದಾರೆ ಎಂದು ಅಂಪೈರ್ ಅಲೀಮ್‌ ದಾರ್ ಹಾಗೂ ಇಯಾನ್ ಗೊಲ್ಡ್ ಶಂಕೆ ವ್ಯಕ್ತಪಡಿಸಿದ್ದರು.

ಈಗಾಗಲೇ ಬಾಲ್ ಟ್ಯಾಂಪರಿಂಗ್ ನಡೆಸಿದ ಆರೋಪದ ಮೇಲೆ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಹಾಗೂ ಕ್ಯಾಮರಾನ್ ಬೆನ್‌ ಕ್ರಾಫ್ಟ್ ನಿಷೇಧದ ಶಿಕ್ಷೆ ಅನುಭವಿಸುತ್ತಿದ್ದಾರೆ.

Comments are closed.