ಕ್ರೀಡೆ

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಗೆ ಭಾರತ ತಂಡ ಪ್ರಕಟ: ಅಶ್ವಿನ್, ಜಡೇಜಾ, ಕುಲದೀಪ್, ಕಾರ್ತಿಕ್, ಪಂತ್ ಗೆ ಸ್ಥಾನ

Pinterest LinkedIn Tumblr

ನವದೆಹಲಿ: ಇಂಗ್ಲೆಂಡ್ ವಿರುದ್ಧ ಬಹುನಿರೀಕ್ಷಿತ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಮೂರು ಪಂದ್ಯಗಳಿಗೆ ಟೀಂ ಇಂಡಿಯಾ ತಂಡ ಪ್ರಕಟವಾಗಿದೆ.

ಇಂಗ್ಲೆಂಡ್ ವಿರುದ್ಧದ ಟಿ 20 ಹಾಗೂ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಮಣಿಕಟ್ಟಿನ ಸ್ಪಿನ್ನರ್ ಕುಲ್‌ದೀಪ್ ಯಾದವ್ ಗೆ ಟೆಸ್ಟ್ ತಂಡದಲ್ಲಿ ಸ್ಥಾನ ಲಭಿಸಿದೆ.

ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಎದುರಿನ ಟಿ 20 ಹಾಗೂ ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಟೆಸ್ಟ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಇವರಲ್ಲದೆ ಅಜಿಂಕ್ಯ ರಹಾನೆ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾಮುರಳಿ ವಿಜಯ್, ಚೇತೇಶ್ವರ ಪೂಜಾರ ಸಹ ತಂಡದಲ್ಲಿ ಸ್ಥಾನ ಗಳಿಸಿಕೊಂಡಿದ್ದಾರೆ.

ಇನ್ನು ನಾಯಕ ವಿರಾಟ್ ಕೊಹ್ಲಿ ಜತೆಗೆ ಶಿಖರ್ ಧವನ್, ಕನ್ನಡಿಗ ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಉಮೇಶ್ ಯಾದವ್ ಹಾಗೂ ಶಾರ್ದೂಲ್ ಠಾಕೂರ್ ತಂಡದಲ್ಲಿದ್ದು ರಿಷಭ್ ಪಂತ್ ಗೆ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಲಭಿಸಿದೆ.

ಇಷ್ಟಾಗಿ ರೋಹಿತ್ ಶರ್ಮಾ ಟೆಸ್ಟ್ ತಂಡದಲ್ಲಿ ಸೇರ್ಪಡೆಯಾಗಿಲ್ಲ ಎನ್ನುವುದು ಗಮನಾರ್ಹ ಅಂಶ.

ಇಂಗ್ಲೆಂಡ್ ವಿರುದ್ಧ ಮೊದಲ ಮೂರು ಟೆಸ್ಟ್ ಪಂದ್ಯಗಳಿಗೆ ಪ್ರಕಟವಾದ ಭಾರತ ತಂಡದ ವಿವರ ಹೀಗಿದೆ-
ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, (ಉಪ ನಾಯಕ) ಕರುಣ್ ನಾಯರ್, ದಿನೇಶ್ ಕಾರ್ತಿಕ್, (ವಿಕೆಟ್ ಕೀಪರ್) , ರಿಷಬ್ ಪಂತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್‌ದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್

Comments are closed.