ಕ್ರೀಡೆ

ಪಂದ್ಯದ ಗೆಲುವಿಗಾಗಿ ಗಾಯಗೊಂಡಿದ್ದರು ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿ ಹೀರೊ ಎನಿಸಿಕೊಂಡ ಬಾಂಗ್ಲಾ ಆಟಗಾರ

Pinterest LinkedIn Tumblr

ದುಬೈ: 2018ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ಶ್ರೀಲಂಕಾ ವಿರುದ್ಧ 137 ರನ್ ಗಳಿಂದ ಭರ್ಜರಿ ಜಯ ಗಳಿಸಿರುವ ಬೆನ್ನಲ್ಲೇ ಇದೀಗ ಸಂಕಷ್ಟ ಎದುರಾಗಿದೆ.

ಬಾಂಗ್ಲಾ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ತಮಿಮ್ ಇಕ್ಬಾಲ್ ಬೆರಳಿಗೆ ಗಾಯ ಮಾಡಿಕೊಂಡು ಪೆವಿಲಿಯನ್ ಸೇರಿದ್ದರು. ಆದರೆ ಪಂದ್ಯದ 47ನೇ ಓವರ್ ನಲ್ಲಿ ಅನಿವಾರ್ಯವಾಗಿ ಇಕ್ಬಾಲ್ ಬ್ಯಾಟಿಂಗ್ ಮಾಡಬೇಕಾಯಿತು. ಈ ವೇಳೆ ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನು ಇಕ್ಬಾಲ್ ತಂಡಕ್ಕಾಗಿ ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿರುವುದು ಕ್ರಿಕೆಟ್ ಅಭಿಮಾನಿಗಳ ಪ್ರಶಂಸೆಗೆ ಕಾರಣವಾಗಿದ್ದು ಈ ಕುರಿತು ಟ್ವೀಟ್ ಮಾಡಿರುವ ಹಲವು ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿರುವುದು ನಿಜಕ್ಕೂ ಅಭಿನಂದನಾರ್ಹ. ಆತನ ಧೈರ್ಯ ಮೆಚ್ಚಲೇಬೇಕು ಎಂದು ಟ್ವೀಟಿಸಿದ್ದಾರೆ.

ಲಂಕಾ ವಿರುದ್ಧದ ಪಂದ್ಯದಲ್ಲಿ 46.5 ಓವರ್ ನಲ್ಲಿ ಬಾಂಗ್ಲಾದ 9ನೇ ವಿಕೆಟ್ ಪತನಗೊಂಡಿದ್ದು ಈ ಹಿನ್ನೆಲೆಯಲ್ಲಿ ಗಾಯಕೊಂಡಿದ್ದರು ದೃತಿಗೆಡದೆ ಇಕ್ಬಾಲ್ ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿ ಸಹ ಆಟಗಾರನಿಗೆ ಸಾಥ್ ನೀಡಿದರು. ಅಂತಿಮವಾಗಿ 49.3 ಓವರ್ ಗಳಲ್ಲಿ ಬಾಂಗ್ಲಾ 261 ರನ್ ಗಳಿಗೆ ಆಲೌಟ್ ಆಯಿತು. ಇಕ್ಬಾಲ್ 2 ರನ್ ಗಳಿಸಿ ಅಜೇಯರಾಗಿ ಉಳಿದರು.

Comments are closed.