ಕ್ರೀಡೆ

ಭಾರತ-ಪಾಕ್ ನಡುವೆ ನಡೆಯುವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಲಿರುವ ಇಮ್ರಾನ್ ಖಾನ್

Pinterest LinkedIn Tumblr

ಕರಾಚಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯುವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಬುಧವಾರ ದುಬೈನಲ್ಲಿ ಭಾರತ – ಪಾಕಿಸ್ತಾನ ಪಂದ್ಯ ವೀಕ್ಷಿಸಲಿದ್ದಾರೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿರುವುದಾಗಿ ಜಿಯೋ ಟಿವಿ ವರದಿ ಮಾಡಿದೆ.

ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತಂಡ 1992ರಲ್ಲಿ ಏಷ್ಯಾ ಕಪ್ ​ಅನ್ನು ಗೆದ್ದುಕೊಂಡಿತ್ತು.

ಇಮ್ರಾನ್ ಖಾನ್ ಅವರು ಪ್ರಧಾನಿಯಾದ ಮೇಲೆ ಇದೇ ಮೊದಲ ಬಾರಿಗೆ ವಿದೇಶ ಪ್ರವಾಸ ಕೈಗೊಂಡಿದ್ದು, ಸೆಪ್ಟೆಂಬರ್ 18ರಿಂದ ಎರಡು ದಿನಗಳ ಸೌದಿ ಪ್ರವಾಸ ಆರಂಭಿಸಿದ್ದಾರೆ. ಈ ವೇಳೆ ಇಮ್ರಾನ್ ಖಾನ್ ಸೌದಿ ದೊರೆ ಸಲ್ಮಾನ್ ಬಿನ್ ಅಬುಲಾಜಿಜ್ ಮತ್ತು ದೊರೆ ಮೊಹಮದ್ ಬಿನ್ ಸಲ್ಮಾನ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

Comments are closed.