ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು

Pinterest LinkedIn Tumblr

ಅಡಿಲೇಡ್: ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿದೆ.

ಭಾರತ ನೀಡಿದ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ತಂಡ 291 ರನ್ ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ವಿರುದ್ಧ 31 ರನ್ ಗಳ ಅಂತರದಲ್ಲಿ ಮಂಡಿಯೂರಿತು. ಆಸ್ಟ್ರೇಲಿಯಾ ಪರ ಬಾಲಂಗೋಚಿ ಬ್ಯಾಟ್ಸಮನ್ ಗಳಾದ ನಾಥನ್ ಲಿಯಾನ್ (ಅಜೇಯ 38)ರನ್, ಮಿಚೆಲ್ ಸ್ಟಾರ್ಕ್ (28 ರನ್) ಮತ್ತು ಪ್ಯಾಟ್ ಕಮಿನ್ಸ್ (28 ರನ್) ಹರಸಾಹಸ ಪಟ್ಟರಾದರೂ, ಭಾರತೀಯ ಬೌಲರ್ ಗಳ ಎದುರು ಅವರ ಆಟ ನಡೆಯಲಿಲ್ಲ. ಅಂತಿಮವಾಗಿ ಆರ್ ಅಶ್ವಿನ್ ಹೇಜಲ್ ವುಡ್ ವಿಕೆಟ್ ಪಡೆಯುವುದರೊಂದಿಗೆ ಆಸಿಸ್ ನೆಲದಲ್ಲಿ ಭಾರತ ತಂಡ 31 ರನ್ ಗಳ ಐತಿಹಾಸಿಕ ಗೆಲುವು ಸಾಧಿಸಿತು.

ಭಾರತದ ಪರ ಜಸ್ ಪ್ರೀತ್ ಬುಮ್ರಾ, ಆರ್ ಅಶ್ವಿನ್ ಮತ್ತು ಮಹಮದ್ ಶಮಿ ತಲಾ 3 ವಿಕೆಟ್ ಪಡೆದು ಮಿಂಚಿದರೆ, ಇಶಾಂತ್ ಶರ್ಮಾ 1 ವಿಕೆಟ್ ಪಡೆದರು.

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಗೆಲುವು
ಆಸಿಸ್ ನೆಲದಲ್ಲಿ ಸರಣಿಯ ಮೊದಲ ಪಂದ್ಯದಲ್ಲೇ ಗೆಲುವು ಸಾಧಿಸಿರುವುದು ಭಾರತಕ್ಕೆ ಐತಿಹಾಸಿಕ ಸಾಧನೆಯಾಗಿದ್ದು, ಈ ವರೆಗೂ ಆಸಿಸ್ ನೆಲದಲ್ಲಿ ಭಾರತ ಈ ಸಾಧನೆ ಮಾಡಿರಲಿಲ್ಲ. ಕ್ರಿಕೆಟ್ ಇತಿಹಾಸದಲ್ಲೇ ಆಸಿಸ್ ನೆಲದಲ್ಲಿ ಸರಣಿಯ ಮೊದಲ ಪಂದ್ಯದಲ್ಲೇ ಭಾರತ ಜಯ ಸಾಧಿಸಿರುವುದು ಇದೇ ಮೊದಲು.

Comments are closed.