ಕ್ರೀಡೆ

ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟ: ಈ ಬಾರಿಯೂ ಅಗ್ರ ಶ್ರೇಯಾಂಕ ಕಾಯ್ದುಕೊಂಡ ಕೊಹ್ಲಿ; ರಿಷಬ್ ಪಂತ್, ಜಸ್ಪ್ರೀತ್ ಬೂಮ್ರಾ ಸ್ಥಾನ

Pinterest LinkedIn Tumblr

ದುಬೈ: ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಗೊಂಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಬಾರಿಯೂ ಅಗ್ರ ಶ್ರೇಯಾಂಕ ಕಾಯ್ದುಕೊಂಡಿದ್ದಾರೆ. ವಿಕೆಟ್ ಕೀಪರ್ ರಿಷಭ್ ಪಂತ್ ಹಾಗೂ ವೇಗಿ ಜಸ್ಪ್ರೀತ್ ಬೂಮ್ರಾ ಉತ್ತಮ ಸ್ಥಾನ ಪಡೆದುಕೊಂಡಿದ್ದಾರೆ.

ಪರ್ತ್ ನಲ್ಲಿ ನಡೆದ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 146 ರನ್ ಗಳಿಂದ ಗೆಲುವು ಸಾಧಿಸಿದ್ದರೂ ಈ ಪಂದ್ಯದ ಮೊದಲ ಇನ್ಸಿಂಗ್ಸ್ ನಲ್ಲಿ 123 ರನ್ ಗಳಿಸಿದ ವಿರಾಟ್ ಕೊಹ್ಲಿ 14 ಅಂಕ ಪಡೆಯುವ ಮೂಲಕ 934 ಅಂಕಗಳಿಗೆ ತಲುಪಿದ್ದಾರೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೀಗೆ ನ್ಯೂಜಿಲ್ಯಾಂಡ್ ನಾಯಕ ಕೆನ್ ವಿಲಿಯಮ್ ಸನ್ ಅವರಿಗಿಂತ 7 ರಿಂದ 19 ಹೆಚ್ಚು ಅಂಕ ಪಡೆದುಕೊಂಡಿದ್ದಾರೆ. ಕೆನ್ ವಿಲಿಯಮ್ ಸನ್ 900 ಅಂಕಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

ರಿಷಭ್ ಪಂತ್ 48 ನೇ ಸ್ಥಾನದಿಂದ 11 ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಟೀಂ ಇಂಡಿಯಾ ಉಪ ನಾಯಕ ಅಜಿಂಕ್ಯಾ ರಹಾನೆ ಎರಡು ಸ್ಥಾನ ಜಿಗಿತ ಕಂಡಿದ್ದು, 15 ನೇ ಸ್ಥಾನ ಪಡೆದುಕೊಂಡಿದ್ದಾರೆ.

ಬೌಲರ್ ಪಟ್ಟಿಯಲ್ಲಿ ಜಸ್ಪ್ರೀತ್ ಬೂಮ್ರಾ 28ನೇ ಸ್ಥಾನದಲ್ಲಿದ್ದರೆ, ಮೊಹಮ್ಮದ್ ಶಮಿ 24 ನೇ ಸ್ಥಾನದಲ್ಲಿದ್ದಾರೆ.

Comments are closed.