ಅಂತರಾಷ್ಟ್ರೀಯ

ರಿಪಬ್ಲಿಕ್ ಡೇಗೆ ಗಿಫ್ಟ್; ಕಿವೀಸ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಗೆಲುವು

Pinterest LinkedIn Tumblr

ಮೌಂಟ್ ಮೌಂಗಾನೆ : ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ವಿಲಿಯಮ್ಸನ್ ಪಡೆ ವಿರುದ್ಧ ಭರ್ಜರಿ 90 ರನ್ ಗಳ ಜಯ ದಾಖಲಿಸಿದೆ.
ನೇಪಿಯರ್ ನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 325 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಕೇವಲ 234 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೊಹ್ಲಿ ಪಡೆ ಎದುರು 90 ರನ್ ಗಳ ಅಂತರದಲ್ಲಿ ಮಂಡಿಯೂರಿತು.

ಪ್ರಮುಖವಾಗಿ ಭಾರತದ ಕುಲದೀಪ್ ಯಾದವ್ ಅವರ ಮಾರಕ ಬೌಲಿಂಗ್ ದಾಳಿಗೆ ಕಿವೀಸ್ ಪಡೆ ಅಕ್ಷರಶಃ ಪತರುಗುಟ್ಟಿತ್ತು. ಮಧ್ಯಮ ಕ್ರಮಾಂಕದಲ್ಲಿ ಬ್ರೇಸ್ ವೆಲ್ ಅರ್ಧಶತಕ ಸಿಡಿಸಿ ಪ್ರತಿರೋಧ ತೋರಿದರಾದರೂ ಅವರಿಗೆ ತಂಡದ ಇತರೆ ಆಟಗಾರರಿಂದ ಉತ್ತಮ ಸಾಥ್ ದೊರೆಯಲಿಲ್ಲ. ಪರಿಣಾಮ ನ್ಯೂಜಿಲೆಂಡ್ ತಂಡ 40.2 ಓವರ್ ಗಳಲ್ಲಿ ಕೇವಲ 234 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.

ಭಾರತದ ಪರ ಕುಲದೀಪ್ ಯಾದವ್ 4 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್ ಮತ್ತು ಯಜುವೇಂದ್ರ ಚಾಹಲ್ ತಲಾ 2 ವಿಕೆಟ್ ಪಡೆದರು. ಅಂತೆಯೇ ಕೇದಾರ್ ಜಾದವ್ ಒಂದು ವಿಕೆಟ್ ಪಡೆದರು. ಬ್ಯಾಟಿಂಗ್ ವೇಳೆ 87 ರನ್ ಸಿಡಿಸಿ ಭಾರತದ ಬೃಹತ್ ಮೊತ್ತಕ್ಕೆ ಕಾರಣರಾದ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಆ ಮೂಲಕ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಭಾರತ 2-0 ಅಂತರದ ಮುನ್ನಡೆ ಸಾಧಿಸಿದ್ದು, ಉಳಿದಿರುವ ಮೂರು ಪಂದ್ಯಗಳಲ್ಲಿ ಒಂದನ್ನು ಗೆದ್ದರೂ ಸರಣಿ ಭಾರತದ ಕೈವಶವಾಗಲಿದೆ.

Comments are closed.