ಕ್ರೀಡೆ

45 ವರ್ಷದ ನಂತರ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಪಡೆದ ಕೆರಿಬಿಯನ್!

Pinterest LinkedIn Tumblr


ದುಬೈ: ಬರೋಬ್ಬರಿ 45 ವರ್ಷಗಳ ಬಳಿಕ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ವೆಸ್ಟ್ ಇಂಡೀಸ್ ಆಟಗಾರನೊಬ್ಬ ನಂಬರ್ 1 ಸ್ಥಾನ ಪಡೆದಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಜಾಸನ್ ಹೋಲ್ಡರ್ ಆಕರ್ಷಕ ದ್ವಿಶತಕ ಸಿಡಿಸುವ ಜತೆಗೆ 2 ವಿಕೆಟ್ ಪಡೆದುಕೊಂಡು ಮಿಂಚಿದ್ದರು .ಈ ಪ್ರದರ್ಶನದಿಂದ 440 ಅಂಕ ಸಂಪಾದಿಸಿರುವ ಅವರು ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ನಂಬರ್ 1 ಆಲ್ ರೌಂಡರ್ ಆಗಿ ಹೊರಹೊಮ್ಮಿದ್ದಾರೆ.
ಇನ್ನು ಕಳೆದ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕ್ರಿಕೆಟಿಗನೋರ್ವ ಐಸಿಸಿ ಟೆಸ್ಟ್ ಶ್ರೇಯಾಂಕದ ಆಲ್ ರೌಂಡರ್ ವಿಭಾಗದಲ್ಲಿ ನಂಬರ್ 1 ಸ್ಥಾನ ಅಲಂಕರಿಸಿರುವ ಮಹತ್ವದ ಸಾಧನೆ ಮಾಡಿದ್ದಾರೆ. 1974ರಲ್ಲಿ ವೆಸ್ಟ್ ಇಂಡೀಸ್ ನ ಗಾರ್ಫಿಲ್ಡ್ ಸೊಬರ್ಸ್ ಈ ಶ್ರೇಯಾಂಕ ಪಡೆದುಕೊಂಡಿದ್ದರು.
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಕಿಗಾಸೋ ರಬಾಡ ನಂಬರ್ 1 ಸ್ಥಾನದಲ್ಲಿದ್ದಾರೆ.

Comments are closed.