ಕ್ರೀಡೆ

ತನ್ನ ಸಾವಿನ ವರದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ಹೇಳಿದ್ದೇನು…?

Pinterest LinkedIn Tumblr

ಮುಂಬೈ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಸುರೇಶ್ ರೈನಾ ಅಪಘಾತವೊಂದರಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿದಾಡಿದ್ದು ಈ ಬಗ್ಗೆ ರೈನಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈನಾಗೆ ಅಪಘಾತವಾಗಿರುವಂತೆ ತಿರುಚಲಾದ ಸುಳ್ಳು ಸುದ್ದಿ ಹಾಗೂ ಫೋಟೋಗಳು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದವು. ಇನ್ನು ಉತ್ತರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರೈನಾ ಸಾವನ್ನಪ್ಪಿದ್ದಾರೆ ಎಂದು ಫೋಟೋಗಳ ಮೇಲೆ ಬರೆಯಲಾಗಿತ್ತು.

ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರೈನಾ, ಸಾಮಾಜಿಕ ಜಾಲತಾಣದಲ್ಲಿ ಸ್ಫಷ್ಟನೆ ನೀಡಿದ್ದು ಇಂತಹ ಸುಳ್ಳು ಸುದ್ದಿಗಳನ್ನು ನಿರ್ಲಕ್ಷ್ಯ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ. ನಮ್ಮ ಕುಟುಂಬ ಸದಸ್ಯರು ಸಾಕಷ್ಟು ನೋವುಂಡಿದ್ದಾರೆ. ಈ ಸುಳ್ಳು ಸುದ್ದಿಯನ್ನ ಪ್ರಸಾರ ಮಾಡಿದ ಯೂಟ್ಯೂಬ್ ವಾಹಿನಿಗಳ ವಿರುದ್ಧ ಸೂಕ್ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Comments are closed.