ಕ್ರೀಡೆ

3 ವಾರದಲ್ಲಿ ಹಾರ್ದಿಕ್ ಪಾಂಡ್ಯ 2019ರ ಐಪಿಎಲ್ ಭವಿಷ್ಯ ನಿರ್ಧಾರ!

Pinterest LinkedIn Tumblr


ಮುಂಬೈ: ಬೆನ್ನು ನೋವಿಗೆ ತುತ್ತಾಗಿರುವ ಟೀಂ ಇಂಡಿಯಾ ಅಲ್ರೌಂಡರ್ ಹಾರ್ದಿಕ್ ಪಾಂಡ್ಯ ಈಗಾಗಲೇ ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದ ಹೊರಬಿದ್ದಿದ್ದಾರೆ. ಇದೀಗ ಪಾಂಡ್ಯ 2019ರ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ಹೊರಬೀಳಲಿದೆ.

2018ರ ಎಷ್ಯಾಕಪ್ ಟೂರ್ನಿಯಲ್ಲಿ ಇಂಜುರಿಗೆ ತುತ್ತಾದ ಹಾರ್ದಿಕ್ ಪಾಂಡ್ಯ ಬಳಿಕ ಸತತ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಆಸಿಸ್ ವಿರುದ್ಧದ ಸರಣಿಯಿಂದಲೂ ಹೊರಗುಳಿದಿದ್ದಾರೆ. ಆದರೆ ಮೂರು ವಾರಗಳಲ್ಲಿ ಹಾರ್ದಿಕ್ ಪಾಂಡ್ಯ ಐಪಿಎಲ್ ಟೂರ್ನಿ ಪಾಲ್ಗೊಳ್ಳೋ ಕುರಿತು ನಿರ್ಧಾರ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.

2019ರ ವಿಶ್ವಕಪ್ ಟೂರ್ನಿ ದೃಷ್ಟಿಯಿಂದ ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯಗೆ ಹೆಚ್ಚಿನ ವಿಶ್ರಾಂತಿ ನೀಡಲು ವೈದ್ಯಕೀಯ ತಂಡ ಸೂಚಿಸಿತ್ತು. ಇದೀಗ ಪಾಂಡ್ಯ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಸದ್ಯಕ್ಕೆ ಐಪಿಎಲ್ ಪಾಲ್ಗೊಳ್ಳೋ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದಿದೆ. 3 ವಾರಗಳ ಬಳಿಕ ಪಾಂಡ್ಯ 2019ರ ಐಪಿಎಲ್ ಭವಿಷ್ಯ ನಿರ್ಧಾರವಾಗಲಿದೆ.

Comments are closed.