ಕ್ರೀಡೆ

ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ವಾಯುಸೇನೆಯಿಂದ ಬಾಂಬ್ ದಾಳಿ: ಸೆಹ್ವಾಗ್ ಟ್ವೀಟ್!

Pinterest LinkedIn Tumblr


ನವದೆಹಲಿ: ಪುಲ್ವಾಮಾ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ ಭಾರತೀಯ ವಾಯುಸೇನೆ 10 ಉಗ್ರರ ಅಡಗುತಾಣಗಳ ಮೇಲೆ ಬಾಂಬ್ ದಾಳಿ ನಡಿಸಿದೆ. ಸರಿ ಸುಮಾರು 300 ಉಗ್ರರನ್ನ ಹೊಡೆದುರುಳಿಸಲಾಗಿದೆ ಅನ್ನೋ ಮಾಹಿತಿಗಳು ಲಭ್ಯವಾಗುತ್ತಿದೆ.

ಭಾರತೀಯ ಸೇನೆ ಬೆಳ್ಳಂಬೆಳಗ್ಗೆ ನಡೆಸಿದ ದಾಳಿ ಭಾರತೀಯರಿಗೆ ಅತೀವ ಸಂತಸವನ್ನ ತಂದಿದೆ. ದೇಶದೆಲ್ಲಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಇದೀಗ ಪಾಕ್ ಮೇಲೆ ಬಾಂಬ್ ದಾಳಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಗೌತಮ್ ಗಂಭೀರ್ ಹಾಗೂ ವಿರೇಂದ್ರ ಸೆಹ್ವಾಗ್ ಟ್ವೀಟ್ ಮೂಲಕ ಭಾರತೀಯ ವಾಯುಸೇನೆ ಸಾಧನೆಯನ್ನ ಕೊಂಡಾಡಿದ್ದಾರೆ.

ಅದರಲ್ಲೂ ವಿರೇಂದ್ರ ಸೆಹ್ವಾಗ್ ಟ್ವೀಟ್ ಅದ್ಭುತವಾಗಿದೆ. ಕ್ರಿಕೆಟ್ ಭಾಷೆಯಲ್ಲಿ ಟ್ವೀಟ್ ಮಾಡಿರುವ ಸೆಹ್ವಾಗ್, ಹುಡುಗರು ಅತ್ಯುತ್ತಮವಾಗಿ ಆಡಿದ್ದಾರೆ. ಸುಧಾರಿಸಿಕೊಳ್ಳಿ ಇಲ್ಲದಿದ್ದರೆ ನಾವು ಸುಧಾರಿಸ್ತೀವಿ ಎಂದು ಟ್ವೀಟ್ ಮಾಡಿದ್ದಾರೆ.

Comments are closed.