ಕ್ರೀಡೆ

ಕೊನೆಗೂ ಗೆಲುವಿನ ಖಾತೆ ತೆರೆದ ಆರ್ ಸಿಬಿ; , ಪಂಜಾಬ್ ವಿರುದ್ಧ ಭರ್ಜರಿ ಜಯ ದಾಖಲಿಸಿದ ಕೊಹ್ಲಿ ಪಡೆ

Pinterest LinkedIn Tumblr

ಮೊಹಾಲಿ: ಐಪಿಎಲ್ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಡೆಗೂ ಗೆಲುವಿನ ಖಾತೆ ತೆರೆದಿದೆ.ಮೊಹಾಲಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಎಂಟು ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ಕ್ರೀಸ್ ಗೇಲ್ (99) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 173 ರನ್ ಗಳನ್ನು ಪೇರಿಸಿತ್ತು. ನಂತರ ಈ ಗುರಿ ಬೆನ್ನಟ್ಟಿದ್ದ ಆರ್ ಸಿಬಿ ಪರ ನಾಯಕ ವಿರಾಟ್ ಕೊಹ್ಲಿ ಹಾಗೂ ಪಾರ್ಥಿವ್ ಪಟೇಲ್ ಉತ್ತಮ ಆರಂಭ ಒದಗಿಸಿದರು. ಇವರಿಬ್ಬರು ಮೊದಲ ವಿಕೆಟ್ ಗೆ 3. 5 ಓವರ್ ಗಳಲ್ಲಿ 43 ರನ್ ಗಳಿಸಿದರು.

ಈ ಹಂತದಲ್ಲಿ ಆರ್ ಅಶ್ವಿನ್ ದಾಳಿಯಲ್ಲಿ ಪಾರ್ಥಿವ್ ವಿಕೆಟ್ ಒಪ್ಪಿಸಿದ್ದರು. ಬಳಿಕ ಜೊತೆಯಾದ ಎಬಿ ಡಿವಿಲಿಯರ್ಸ್ ಎಚ್ಚರಿಕೆಯಿಂದ ತಂಡವನ್ನು ಮುನ್ನಡೆಸಿದರು. ಆದರೆ, 33 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ವಿರಾಟ್ ಕೊಹ್ಲಿ 67 ರನ್ ಗಳಿಸಿ ಔಟಾದರು.

ನಂತರ ವಿಲಿಯರ್ಸ್ 35 ಎಸೆತಗಳಲ್ಲಿ ಅರ್ಧ ಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಸಾಗಿಸಿದರು. ಇವರಿಗೆ ಮಾರ್ಕಸ್ ಸ್ಟೋಯ್ನಿಸ್ ಅವರ ಉತ್ತಮ ಬೆಂಬಲ ದೊರಕಿತು. ಇದರಿಂದಾಗಿ ಇನ್ನು ನಾಲ್ಕು ಎಸೆತಗಳು ಬಾಕಿ ಉಳಿದಿರುವಂತೆಯೇ 19.2 ಓವರ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಆರ್ ಸಿಬಿ ಗೆಲುವು ಸಾಧಿಸಿತು.

ಆರ್ ಸಿಬಿ ಚೇಸಿಂಗ್ ನಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಎಬಿ ಡಿವಿಲಿಯರ್ಸ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಅರ್ಹರಾದರು.

Comments are closed.