ಕ್ರೀಡೆ

ಡೆಲ್ಲಿ ಕ್ಯಾಪಿಟೆಲ್ಸ್ ವಿರುದ್ಧ 40 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್

Pinterest LinkedIn Tumblr

ನವದೆಹಲಿ: ಐಪಿಎಲ್ 2019ನೇ ಸಾಲಿನ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟೆಲ್ಸ್ ವಿರುದ್ಧ 40 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಇದರೊಂದಿಗೆ ಆಡಿರುವ 9 ಪಂದ್ಯದಲ್ಲಿ ಆರನೇ ಗೆಲುವು ದಾಖಲಿಸಿರುವ ಮುಂಬೈ, ಡೆಲ್ಲಿಯನ್ನು ಹಿಂದಿಕ್ಕೆ ಎರಡನೇ ಸ್ಥಾನಕ್ಕೇರಿದೆ. ಡೆಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ ಒವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಆರಂಭಿಕರಾದ ರೋಹಿತ್ ಶರ್ಮಾ 30 ರನ್ ಗಳಿಸಿ ಮಿಶ್ರಾ ಬೌಲಿಂಗ್ ನಲ್ಲಿ ಫೆವಿಲಿಯನ್ ನತ್ತ ಹೆಜ್ಜೆ ಹಾಕಿದರೆ, ಕ್ಯೂಡಿಕಾಕ್ 35 ರನ್ ಗಳಿಸಿ ರನ್ ಔಟಾದರು.

ನಂತರ ಬಿಸಿಜೆ ಕಟ್ಟಿಂಗ್ ಎಲ್ ಬಿಡಬ್ಲ್ಯೂಗೆ ಬಲಿಯಾದರು. ಎಸ್ ಎಯಾದವ್ 26 ರನ್ ಗಳಿಸಿ ರಾಬಡಾ ಬೌಲಿಂಗ್ ನಲ್ಲಿ ಪಂಥ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಜೊತೆಯಾದ ಕೆಎಚ್ ಪಾಂಡ್ಯ 37 ಹಾಗೂ ಹಾರ್ದಿಕ್ ಪಾಂಡ್ಯ 32 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ರನ್ ಗಳಿಕೆಯನ್ನು ಹೆಚ್ಚಿಸಿದರು.ಡೆಲ್ಲಿ ಕ್ಯಾಪಿಟಲ್ಸ್ ಪರ ಕೆ ರಾಬಡಾ 2, ಎ ಮಿಶ್ರಾ ಹಾಗೂ ಎಆರ್ ಪಟೇಲ್ ತಲಾ 1 ವಿಕೆಟ್ ಪಡೆದುಕೊಂಡರು.

ಮುಂಬೈ ಇಂಡಿಯನ್ಸ್ ನೀಡಿದ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಪಿಪಿ ಶಾ 20, ಶಿಖರ್ ಧವನ್ 35, ಎಆರ್ ಪಟೇಲ್ 26, ರನ್ ಗಳಿಸದದ್ದು ಹೊರತುಪಡಿಸಿದರೆ ಉಳಿದಂತೆ ಯಾವ ಆಟಗಾರರು ಎರಡಂಕಿ ದಾಟಲಿಲ್ಲ. ಇದರಿಂದಾಗಿ ನಿಗದಿತ ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಲಷ್ಟೇ ಶಕ್ತವಾಯಿತು.

ಇನ್ನೂ ಬೌಲಿಂಗ್ ವಿಭಾಗದಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ ಡಿ ಚಾಹರ್ ಪ್ರಮುಖ ವಿಕೆಟ್ ಕಬಳಿಸುವ ಮೂಲಕ ತಂಡ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. 32 ರನ್ ಗಳಿಸಿದ ಹಾರ್ದಿಕ್ ಪಾಂಡ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.

Comments are closed.