ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಉದಯೋನ್ಮುಖ ಕ್ರಿಕೆಟಿಗನನ್ನು ದುಷ್ಕರ್ಮಿಗಳು ಕೊಲೆಗೈದಿದ್ದು, ಕ್ರಿಕೆಟಿಗ ಹತ್ಯೆ ಇದೀಗ ಮುಂಬೈನಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.
ಮುಂಬೈನ ಭಂಡುಪ್ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ರಾಕೇಶ್ ಗೆ ಚಾಕು ಇರಿದು ಕೊಂದು ಪರಾರಿಯಾಗಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ರಾಕೇಶ್ ನನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದಾರೆಯಾದರೂ, ಅಷ್ಟು ಹೊತ್ತಿಗಾಗಲೇ ರಾಕೇಶ್ ಪ್ರಾಣಪಕ್ಷಿ ಹಾರಿಹೋಗಿತ್ತು.
ಇನ್ನು ಪೊಲೀಸರ ಪ್ರಾಥಮಿಕ ಮಾಹಿತಿ ಅನ್ವಯ ರಾಕೇಶ್ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದ, ಈ ಪ್ರೀತಿ ವಿಚಾರವಾಗಿಯೇ ಆತನನ್ನು ಕೊಲೆಗೈಯ್ಯಲಾಗಿದೆ ಎಂದು ಸ್ಖಳೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Comments are closed.