
ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು ಇದರ ಬೆನ್ನಲ್ಲೇ ಇದೀಗ ಪಾಕಿಸ್ತಾನಿ ಅಭಿಮಾನಿಗಳು ಟೀಂ ಇಂಡಿಯಾ ಗೆಲ್ಲಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಹೌದು ಇದು ನಿಜ. ಯಾಕೆಂದರೆ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅಜೇಯ ಓಟ ಮುಂದುವರೆಸಿದೆ. ಇದನ್ನು ಹೀಗೆ ಮುಂದುವರೆಸಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಗೆದ್ದರೆ ಸೆಮಿಫೈನಲ್ ಗೆ ಹೋಗುವ ಪಾಕಿಸ್ತಾನದ ಕನಸಿಗೆ ಪುಕ್ಕ ಬರುತ್ತದೆ.
ಐಸಿಸಿ ಕ್ರಿಕೆಟ್ ವಿಶ್ವಕಪ್ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ಕ್ರಮವಾಗಿ ಮೊದಲ ನಾಲ್ಕು ಸ್ಥಾನದಲ್ಲಿ ನಿಂತಿವೆ. ಇನ್ನು ಸೆಮಿಫೈನಲ್ ಗೆ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಟೀಂ ಇಂಡಿಯಾ ಬರುವುದು ಬಹುತೇಕ ಖಚಿತವಾಗಿದೆ. ಇನ್ನು ನಾಲ್ಕನೇ ಸ್ಥಾನಕ್ಕೆ ಇಂಗ್ಲೆಂಡ್, ಬಾಂಗ್ಲಾ, ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಏಳು ಪಂದ್ಯಗಳಲ್ಲಿ ಇಂಗ್ಲೆಂಡ್ ನಾಲ್ಕು ಪಂದ್ಯಗಳಲ್ಲಿ ಗೆದ್ದಿದ್ದು ಮೂರು ಪಂದ್ಯಗಳಲ್ಲಿ ಸೋತಿದೆ. ಉಳಿದ ಎರಡು ಪಂದ್ಯಗಳಲ್ಲಿ ನ್ಯೂಜಿಲ್ಯಾಂಡ್ ಹಾಗೂ ಟೀಂ ಇಂಡಿಯಾ ವಿರುದ್ಧ ಆಡಲಿದೆ. ಇನ್ನು ಒಂದು ಪಂದ್ಯ ಸೋತರು ಇಂಗ್ಲೆಂಡ್ ಸೆಮಿಫೈನಲ್ ಏರುವ ಕನಸು ನನಸಾಗಲ್ಲ. ಹಾಗಾದಲ್ಲಿ ಬಾಂಗ್ಲಾ, ಪಾಕ್ ಅಥವಾ ಶ್ರೀಲಂಕಾ ಸೆಮಿಫೈನಲ್ ಗೆ ಏರುವ ಸಾಧ್ಯತೆ ಇದೆ.
ಹೀಗಾಗಿ ಪಾಕಿಸ್ತಾನದ ಅಭಿಮಾನಿಗಳು ಇದೀಗ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಗೆಲ್ಲಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಭಾನುವಾರ ನಡೆಯಲಿರುವ ಇಂಗ್ಲೆಂಡ್ ಮತ್ತು ಭಾರತ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ಅಭಿಮಾನಿಗಳು ಯಾರನ್ನು ಬೆಂಬಲಿಸುತ್ತೀರಾ ಎಂದು ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ನಾಸೀರ್ ಹುಸೇನ್ ಪ್ರಶ್ನಿಸಿದ್ದು ಇದಕ್ಕೆ ಪಾಕ್ ಅಭಿಮಾನಿಗಳು ಭಾರತವನ್ನೇ ಬೆಂಬಲಿಸಿದ್ದಾರೆ.
Comments are closed.