ಕ್ರೀಡೆ

ಭಾರತ ತಂಡದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ಸಲಹಾ ಸಮಿತಿಗೆ ಮುಖ್ಯಸ್ಥರಾಗಿ ಕಪಿಲ್ ದೇವ್ ನೇಮಕ; ರವಿಶಾಸ್ತ್ರಿಗೆ ಕೊಕ್?

Pinterest LinkedIn Tumblr

ನವದೆಹಲಿ: ಐಸಿಸಿ ವಿಶ್ವಕಪ್ ಸೋಲಿನ ಬೆನ್ನಲ್ಲೇ ಭಾರತ ತಂಡದಲ್ಲಿ ಮಹತ್ತರ ಬದಲಾವಣೆ ಮಾಡುವ ಸಾಧ್ಯತೆ ಇದ್ದು, ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆಗಾಗಿ ತಂಡದ ಸಲಹಾ ಸಮಿತಿಗೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಬಗ್ಗೆ ಕ್ರಿಕೆಟ್ ವೆಬೈ ಸೈಟ್ ವೊಂದು ವರದಿ ಮಾಡಿದ್ದು, ಹಾಲಿ ಟೀಂ ಇಂಡಿಯಾದ ಸಲಹಾ ಸಮಿತಿಗೆ ಭಾರತದ ಲೆಜೆಂಡ್ ಮಾಜಿ ಆಟಗಾರ ಕಪಿಲ್ ದೇವ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ. ಪ್ರಸ್ತುತ ಈ ಸಲಹಾ ಸಮಿತಿಯಲ್ಲಿ, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಸದಸ್ಯರಾಗಿದ್ದು, ಈ ಸಮಿತಿ ಕಪಿಲ್ ದೇವ್ ಅವರನ್ನು ಮುಖ್ಯಸ್ಥರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.

ಇದೇ ಸಲಹಾ ಸಮಿತಿಯಿಂದಲೇ ನೂತನ ಟೀಂ ಇಂಡಿಯಾ ಕೋಚ್ ಆಯ್ಕೆ ನಡೆಯಲಿದೆ ಎಂದು ಹೇಳಲಾಗಿದೆ.

ಕೋಚ್ ರವಿಶಾಸ್ತ್ರಿಗೆ ಕೊಕ್?
ಇನ್ನು ಹಾಲಿ ಕೋಚ್ ರವಿಶಾಸ್ತ್ರಿ ಅವರ ಸ್ಥಾನದ ಕುರಿತೂ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದು, ಕೋಚ್ ರವಿಶಾಸ್ತ್ರಿ ಅವರನ್ನು ಕೋಚ್ ಹುದ್ದೆಯಿಂದ ಕೆಳಗಿಳಿಸಿ ಬೇರೆ ನೂತನ ಕೋಚ್ ಅನ್ನು ಟೀಂ ಇಂಡಿಯಾಗೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಸ್ತುತ ರವಿಶಾಸ್ತ್ರಿ ಮತ್ತು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತಯಾರಿ ನಡೆಸುತ್ತಿದೆ.

Comments are closed.