ಕ್ರೀಡೆ

ಮಹೇಂದ್ರ ಸಿಂಗ್ ಧೋನಿಯಿಂದ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ

Pinterest LinkedIn Tumblr


ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನವಾದ ಇಂದು ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್​ ಜೀವನವನ್ನು ಕೊನೆಗೊಳಿಸಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಈ ಕುರಿತು ವಿಡಿಯೋವನ್ನು ಧೋನಿ ಹಂಚಿಕೊಂಡಿದ್ದು, ನಿವೃತ್ತಿ ಸಮಯ ಬಂದಾಯಿತು ಎಂದಿದ್ದಾರೆ.
ಭಾರತಕ್ಕೆ ಎರಡು ಬಾರಿ ವಿಶ್ವಕಪ್ ತಂದುಕೊಂಡ ಕೀರ್ತಿ ಧೋನಿಗೆ ಸಲ್ಲುತ್ತದೆ. ಧೋನಿ ಕೊನೆಯ ಬಾರಿ 2019 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿದಿದ್ದರು.

2019 ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ, ಕ್ರಿಕೆಟ್ ರಂಗದಿಂದ ದೂರವುಳಿದಿದ್ದರು. ಸುದೀರ್ಘ ವಿಶ್ರಾಂತಿಯಲ್ಲಿದ್ದ ಮಹಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪುನರಾಗಮನ ಮಾಡುತ್ತಾರ ಅಥವಾ ಇಲ್ಲವೇ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿದ್ದವು.

ಅಲ್ಲದೆ ಟಿ-20 ವಿಶ್ವಕಪ್‌ನಲ್ಲೂ ಭಾಗವಹಿಸುವರೇ ಎಂಬುದು ಅನುಮಾನವೆನಿತ್ತು. ಈ ಮಧ್ಯೆ ಬಿಸಿಸಿಐ ವಾರ್ಷಿಕ ಗುತ್ತಿಗೆ ಒಪ್ಪಂದದಿಂದಲೂ ವಿಶ್ವಕಪ್ ವಿಜೇತ ಮಾಜಿ ನಾಯಕರನ್ನು ಹೊರಗಿಡಲಾಗಿತು. ಯುವ ಆಟಗಾರರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕ್ರಿಕೆಟ್ ರಂಗದಿಂದ ದೂರವುಳಿದಿದ್ದ 38ರ ಹರೆಯದ ಮಹೇಂದ್ರ ಸಿಂಗ್ ಧೋನಿ ಸದ್ಯ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸುವ ಮೂಲಕ ಭಾರತ ತಂಡದಿಂದ ದೂರ ಸರಿದಿದ್ದಾರೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಎಂಎಸ್ ಧೋನಿ ಪದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ-20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು.

Comments are closed.