ಅಂತರಾಷ್ಟ್ರೀಯ

13ನೇ ಆವೃತ್ತಿಯ ಐಪಿಎಲ್​ನಲ್ಲೂ ಪ್ರಶಸ್ತಿ ಗೆದ್ದುಕೊಂಡ ಮುಂಬೈಗೆ 5ನೇ ಬಾರಿ ಐಪಿಎಲ್ ಚಾಂಪಿಯನ್‌ಪಟ್ಟ

Pinterest LinkedIn Tumblr

ದುಬೈ, ನವೆಂಬರ್.10 :ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್​ನ ಫೈನಲ್​ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಜಯಗಳಿಸಿದ್ದು, ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ನಲ್ಲಿ ಸತತ 2ನೇ ಮತ್ತು ಒಟ್ಟಾರೆ 5ನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿದೆ.

ಲೀಗ್ ಹಂತದಿಂದ ಪ್ರಶಸ್ತಿ ಸುತ್ತಿನವರೆಗೂ ಬಲಿಷ್ಠ ನಿರ್ವಹಣೆ ಪ್ರದರ್ಶಿಸುತ್ತ ಬಂದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್-13ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ. ಚೊಚ್ಚಲ ಪ್ರಶಸ್ತಿ ಕನಸಿನಲ್ಲಿದ್ದ ಶ್ರೇಯಸ್ ಅಯ್ಯರ್ ಬಳಗಕ್ಕೆ ನಿರಾಸೆ ಮೂಡಿಸಿತು.

ಐಪಿಎಲ್​ನ ಫೈನಲ್​ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಮೊದಲಿಗೆ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 156 ರನ್​ ಗಳಿಸಿತ್ತು.

157 ರನ್​ಗಳ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಡೆಲ್ಲಿ ವಿರುದ್ಧ ಜಯಗಳಿಸಿದೆ. ಈವರೆಗೆ ಮುಂಬೈ ಇಂಡಿಯನ್ಸ್ 5 ಬಾರಿ ಐಪಿಎಲ್​ ಚಾಂಪಿಯನ್ಸ್ ಎನ್ನಿಸಿಕೊಂಡಂತಾಗಿದೆ.ಲೀಗ್ ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿ ತಂಡ ಎಂಬ ಹಣೆಪಟ್ಟಿಗೆ ತಕ್ಕಂತೆ ನಿರ್ವಹಣೆ ತೋರಿದ ರೋಹಿತ್ ಶರ್ಮ ಬಳಗ ಐಪಿಎಲ್-13ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತು.

ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ, ನಾಯಕ ಶ್ರೇಯಸ್ ಅಯ್ಯರ್ (65ರನ್, 50 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ರಿಷಭ್ ಪಂತ್ (56 ರನ್, 38 ಎಸೆತ, 4 ಬೌಂಡರಿ, 2 ಸಿಕ್ಸರ್) ಜೋಡಿಯ ಸಮಯೋಚಿತ ಬ್ಯಾಟಿಂಗ್‌ನಿಂದ 7 ವಿಕೆಟ್‌ಗೆ 156 ರನ್ ಗಳಿಸಿತು.

ಪ್ರತಿಯಾಗಿ ಮುಂಬೈ ಇಂಡಿಯನ್ಸ್, ನಾಯಕ ರೋಹಿತ್ ಶರ್ಮ (68ರನ್, 51 ಎಸೆತ, 5 ಬೌಂಡರಿ, 4 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ನೆರವಿನಿಂದ 18.4 ಓವರ್‌ಗಳಲ್ಲಿ 5 ವಿಕೆಟ್‌ಗೆ 157 ರನ್‌ಗಳಿಸುವ ಮೂಲಕ 13ನೇ ಆವೃತ್ತಿಯ ಐಪಿಎಲ್​ನ ಫೈನಲ್​ ಮ್ಯಾಚ್​ನಲ್ಲೂ ಗೆಲುವಿನ ನಗೆ ಬೀರಿತು.

Comments are closed.