ಕ್ರೀಡೆ

ಅಪಘಾತಕ್ಕೀಡಾದ ಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು: ಗಂಭೀರ ಗಾಯಗೊಂಡ ಟೈಗರ್ ವುಡ್ಸ್ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಕ್ಯಾಲಿಫೋರ್ನಿಯಾ: ಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತಕ್ಕೀಡಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಟೈಗರ್ ವುಡ್ಸ್ ಅವರನ್ನು ಆಸ್ವತ್ರೆಗೆ ದಾಖಲಿಸಲಾಗಿದೆ.

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಕಾರು ಬ್ಲ್ಯಾಕ್‌ಹಾರ್ಸ್ ರಸ್ತೆಯಲ್ಲಿರುವ ಹಾಥಾರ್ನ್ ಬೌಲೆವಾರ್ಡ್‌ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿತ್ತು. ಬೆಳಗ್ಗೆ 7.12ರ ಸುಮಾರಿಗೆ ವುಡ್ಸ್​ ಕಾರು ಅಪಘಾತಕ್ಕೀಡಾಯಿತು. ಕಾರು ಟೈಗರ್ ವುಡ್ಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಈ ವೇಳೆ ಕಾರಿನಲ್ಲಿದ್ದ ಟೈಗರ್ ವುಡ್ಸ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡ ಟೈಗರ್ ವುಡ್ಸ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವುಡ್ಸ್​ ಅವರ ಕಾರು ಸಂಪೂರ್ಣ ಹಾನಿಯಾಗಿದೆ ಎಂದು ಲಾಸ್​ ಏಂಜಲಿಸ್​ನ ಕೌಂಟಿ ಶೆರಿಫ್ಸ್​ ಇಲಾಖೆ ಮಾಹಿತಿ ನೀಡಿದೆ.

ಟೈಗರ್​ ವುಡ್​ ಕಾಲಿಗೆ ಅನೇಕ ಗಾಯಗಳಾಗಿರುವುದಾಗಿ ಅವರ ಏಜೆಂಟ್​ ಮಾರ್ಕ್​ ಸ್ಟೈನ್​ಬರ್ಗ್​ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಪಘಾತದ ವೇಳೆ ಕಾರಿನಲ್ಲಿ ವುಡ್ಸ್​ ಒಬ್ಬರೆ ಇಬ್ಬರು. ಅವರ ಕಾಲಿಗೆ ಅನೇಕ ಗಾಯಗಳಾಗಿವೆ. ಸದ್ಯ ಕಾಲಿಗೆ ಸರ್ಜರಿ ಮಾಡಲಾಗಿದೆ ಎಂದು ಸ್ಟೈನ್​ಬರ್ಗ್​ ತಿಳಿಸಿದ್ದಾರೆ.

ಮೂರನೇ ಬಾರಿಗೆ ಅಪಘಾತ
ಇನ್ನು ಟೈಗರ್ ವುಡ್ಸ್ ಈ ಹಿಂದೆ 2 ಬಾರಿ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಂಡಿದ್ದರು. 2009ರಲ್ಲಿ ಇದಕ್ಕಿಂತಲೂ ಭೀಕರವಾಗಿ ಅಪಘಾತ ನಡೆದಿತ್ತು.

Comments are closed.