
ಮಂಗಳೂರು : ಕ್ಯಾಟರಿಂಗ್, ಡೆಕೊರೇಟರ್ಸ್ ಹಾಗೂ ಕಟ್ಟಡ ಕಾರ್ಮಿಕರ ಸಾಮಾಗ್ರಿಗಳ ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ರಾಜ್ಯ ಹಾಗೂ ರಾಷ್ಟ್ರೀಯ ಕ್ರೀಡಾಪಟುಗಳಿಗೆ ಅಭ್ಯಾಸಕ್ಕಾಗಿ ಅವಕಾಶ ಕಲ್ಪಿಸಲಾಗಿದೆ.
ಅದಕ್ಕಾಗಿ ಯುವ ಸಬಲೀಕರಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ತಾವು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ದಾಖಲೆಯ ಪ್ರತಿಗಳನ್ನು ನೀಡಿ ಅನುಮತಿ ಪಡೆಯ ಬಹುದಾಗಿದೆ. ಆ ಅನುಮತಿ ಪತ್ರದೊಂದಿಗೆ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡಬಹುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಆರೋಗ್ಯ ಸಂಬಂಧಿತ ವಿಚಾರಗಳಿಗೆ ತೆರಳುವವರಿಗೆ ಅನುಮತಿ :
ಡಯಾಲಿಸಿಸ್ ಸೇರಿದಂತೆ ಇನ್ನಿತರ ಚಿಕಿತ್ಸೆಗಳಿಗೆ ಆಸ್ಪತ್ರೆಗೆ ತೆರಳುವವರಿಗೆ ಅನುಮತಿ ನೀಡಲಾಗಿದೆ. ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಚಿಕಿತ್ಸೆಗೆ ಸಂಬಂಧಪಟ್ಟ ದಾಖಲೆಗಳನ್ನು ಜೊತೆಯಲ್ಲಿರಿಸಿಕೊಂಡರೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಕಾರ ನೀಡುತ್ತದೆ.
ಕೋವಿಡ್ ನಿಯಂತ್ರಿಸಲು ನಾವೆಲ್ಲರೂ ಒಂದಾಗಿ ಶ್ರಮಿಸಬೇಕಿದೆ. ಹಾಗಾಗಿ ಲಾಕ್ ಡೌನ್ ಸಂದರ್ಭದಲ್ಲಿ ಅನಗತ್ಯವಾಗಿ ಓಡಾಡದೆ ಈ ದೇಶದ ಹಿತಕ್ಕಾಗಿ ಒಂದಾಗಿ ಶ್ರಮಿಸೋಣ ಎಂದು ಶಾಸಕ ವೇದವ್ಯಾಸ್ ಕಾಮತ್ ಮನವಿ ಮಾಡಿಕೊಂಡಿದ್ದಾರೆ.
Comments are closed.