ಅಂತರಾಷ್ಟ್ರೀಯ

ಕೊರೋನಾತಂಕದ ನಡುವೆಯೂ ನಡೆದ ನಿನ್ನೆಯ ಐಪಿಲ್ ಪಂದ್ಯ; ಭರ್ಜರಿ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್

Pinterest LinkedIn Tumblr

ಅಬುದಾಬಿ: ಕೊರೋನಾತಂಕದ ನಡುವೆ ನಡೆದ ಐಪಿಎಲ್ ಟೂರ್ನಿಯ ನಿನ್ನೆಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡದ 135 ರನ್ ಗಳ ಟಾರ್ಗೆಟ್ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಯಕ ಶಿಖರ್ ಧವನ್ (42 ರನ್) ಮತ್ತು ಶ್ರೇಯಸ್ ಅಯ್ಯರ್ (ಅಜೇಯ 47) ಅಮೋಘ ಬ್ಯಾಟಿಂಗ್ ನೆರವಿಂದಾಗಿ 17.5 ಓವರ್ ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ ವಿಕೆಟ್ ಗಳ ಭರ್ಜರಿ ಜಯ ಗಳಿಸಿತು.

ಪೃಥ್ವಿಶಾ 11 ರನ್ ಗಳಿಸಿ ಖಲೀಲ್ ಅಹ್ಮದ್ ಗೆ ವಿಕೆಟ್ ಒಪ್ಪಿಸಿದರೆ, ನಾಯಕ ಶಿಖರ್ ಧವನ್ 42 ರನ್ ಗಳಿಸಿ ರಶೀದ್ ಖಾನ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಗೂಡಿದ ಶ್ರೇಯಸ್ ಅಯ್ಯರ್ (ಅಜೇಯ 47) ಮತ್ತು ರಿಷಬ್ ಪಂತ್ (ಅಜೇಯ 35 ರನ್) ಇನ್ನೂ 13 ಎಸೆತಗಳು ಇರುವಂತೆಯೇ ಗೆಲುವಿನ ನಗೆ ಬೀರಿದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗಧಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 134 ರನ್ ಗಳನ್ನು ಸಾಧಿಸಿತು. ದೆಹಲಿಯ ರಬಾಡಾ ಬೌಲಿಂಗ್ ದಾಳಿಗೆ ತತ್ತರಿಸಿದ ಕೇವಲ 134 ರನ್ ಗಳಿಸಿತು. ಅಬ್ದುಲ್ ಸಮಾದ್ ಗಳಿಸಿದ 28 ರನ್ ರನ್ ಗಳು ವೈಯುಕ್ತಿಕ ಗರಿಷ್ಠ ಮೊತ್ತವಾಗಿದೆ.

Comments are closed.